ಉಡುಪಿ | ಬಿಜಾಡಿ ಸಮುದ್ರತೀರ ಮೇಘರಾಜ್ ಶವ ಪತ್ತೆ ಅನುಮಾನಾಸ್ಪದ – ಕೋಟ ನಾಗೇಂದ್ರ ಪುತ್ರನ್

Date:

Advertisements

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಹಳೆ ಅಳಿವೆ ಪ್ರದೇಶದ ಬೀಜಾಡಿ ಗ್ರಾಮ ವ್ಯಾಪ್ತಿಯ ಸಮುದ್ರ ಕಿನಾರೆಯಲ್ಲಿ ಫೆ. 25 ರಂದು ಸಮುದ್ರಕ್ಕೆ ಮಾರಣ ಬಲೆ ಬಿಡಲು ಹೋಗಿದ್ದ ಮೇಘರಾಜ್ ಎಂಬ 24 ರ ಹರೆಯದ ಯುವಕನ ಸಾವು ಆಕಸ್ಮಿಕವಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿ ಅವರು ಕುಂದಾಪುರ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರಿಗೆ ಸಲ್ಲಿಸಿದ ಮನವಿಯಲ್ಲಿ ಅವರು ಹಲವು ವಿಷಯಗಳು ಸಂಶಯಾಸ್ಪದ ಎಂದು ವಿವರಿಸಿದ್ದಾರೆ.

Advertisements
1004555471

24ರ ಹರೆಯದ ಯುವಕ ಏಕಾಏಕಿ ಸಮುದ್ರ ಪಾಲಾಗುವುದು ಅಸಾಧ್ಯ. ಇದರ ಹಿಂದೆ ಕ್ರಿಕೆಟ್ ಬುಕ್ಕಿಗಳು, ಬಡ್ಡಿ ದಂಧೆಕೋರರ ಕೈವಾಡವಿದೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಈ ಅಕ್ರಮ ದಂಧೆ ಯಗ್ಗಿಲ್ಲದೆ ನಡೆಯುತ್ತಿದ್ದು, ಪೋಲೀಸರ ಗಮನಕ್ಕೆ ಬಾರದಿರುವುದು ಆಶ್ಚರ್ಯವಾಗಿದೆ! ಮೇಘರಾಜ್ ಪ್ರಕರಣದಲ್ಲೂ ಈ ದಂಧೆಯವರೇ ಕೈ ಚಳಕ ತೋರಿಸಿದ್ದಾರೆ. ಅವರನ್ನು ಸಮುದ್ರ ದಡದಲ್ಲಿ ಕೊಲೆ ಮಾಡಿ ನೀರಿಗೆ ಎಸೆದಿದ್ದಾರೆ ಎಂಬ ಸಂಶಯ ಬಲವಾಗಿದೆ. ಆದ್ದರಿಂದ ಪೊಲೀಸರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯ ಹೊರತರಬೇಕು, ಕೊಲೆಯಾದ ವ್ಯಕ್ತಿ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಪುತ್ರನ್ ಆಗ್ರಹಿಸಿದ್ದಾರೆ.

ಮೇಘರಾಜ್ ಅವರು ಮರಣ ಬಲೆ ಬಿಡಲೆಂದು ಸಮುದ್ರಕ್ಕೆ ಬಂದವರು ಅಕಸ್ಮಾತ್ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸುದ್ದಿಯಾಗಿತ್ತು. ಕರಾವಳಿ ಕಾವಲು ಪಡೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದರು. ಮೇಘರಾಜ್ ಬೆಳಿಗ್ಗೆ ಹಳೆ ಅಳಿವೆ ಪ್ರದೇಶದಲ್ಲಿ ಸಮುದ್ರ ಪಾಲಾಗಿದ್ದು, ಸಂಜೆ ಸಮೀಪದಲ್ಲೇ ಅವರ ಶವ ದೊರಕಿತ್ತು. ಇದು ಕೂಡಾ ಸಂಶಯಕ್ಕೆ ಎಡೆ ಮಾಡಿದೆ ಎನ್ನಲಾಗಿದೆ. ಪೋಲೀಸರ ಮುಂದಿನ ಕ್ರಮಕ್ಕಾಗಿ ಕಾದು ನೋಡಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X