ತುಮಕೂರು | ಶಾಲಾ ವಾಹನಕ್ಕೆ ಬೈಕ್‌ ಡಿಕ್ಕಿ : ಅಪ್ರಾಪ್ತ ಬಾಲಕ ಸ್ಥಳದಲ್ಲೇ ಸಾವು

Date:

Advertisements

ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕ ನಗರದ ಎರಡನೇ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಸಾವನಪ್ಪಿದ ಅಪ್ರಾಪ್ತ ಬಾಲಕ ತೇಜಸ್ (14) ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ತೇಜಸ್‌ ಹಿಂಬದಿಯಿಂದ ಬಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಹೀಗಾಗಿ ವಾಹನದ ಹಿಂದಿನ ಚಕ್ರಕ್ಕೆ ಸಿಲುಕಿ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ.

WhatsApp Image 2024 08 17 at 6.08.16 PM

ʼಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ಪೋಷಕರು ವಾಹನಗಳು ನೀಡುತ್ತಿರುವುದು ಕಾನೂನು ಬಾಹಿರ. ಹಾಗಾಗಿ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ವಾಹನ ಮಾಲೀಕರ ಮೇಲೆಯೂ ಕ್ರಮ ಜರುಗಿಸಲಾಗುವುದುʼ ಎಂದು ಸಿಪಿಐ ಗೋಪಿನಾಥ್ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ಅನುಮತಿಸಲಾದ ‘ಪ್ರಾಸಿಕ್ಯೂಷನ್’ ಅಂದ್ರೆ ಏನು? ಮುಂದೇನಾಗಲಿದೆ?

ಸ್ಥಳಕ್ಕೆ ಗುಬ್ಬಿ ಪೊಲೀಸರು ಆಗಮಿಸಿ ಮೃತದೇಹವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X