ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಜೇರಟಗಿ ಗ್ರಾಮದ ಗಾಣಗಾಪುರ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ಲ ಬಿಕೆ ಗ್ರಾಮದ ಯುವಕ ಸಮೀರ ಎಂಬವರು ಸಾವನ್ನಪ್ಪಿದ್ದಾರೆ.
ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ