ಮಂಡ್ಯ | ಮಾಂಸಾಹಾರ ಜಾರಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬೈಕ್‌ ರ್‍ಯಾಲಿ

Date:

ಮಾಂಸಾಹಾರ ಜಾರಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬೈಕ್‌ ರ್‍ಯಾಲಿ ಮಾಡಿದ್ದೇವೆ. 86 ವರ್ಷಗಳಿಂದ ಇದುವರೆಗೂ ನಡೆದಿರುವ ಸಮ್ಮೇಳನಗಳಲ್ಲಿ ಸಸ್ಯಾಹಾರವನ್ನು ಮಾತ್ರ ಕೊಟ್ಟು ನಾಡಿನ ಬಹುಸಂಖ್ಯಾತರ ಮಾಂಸಾಹಾರಕ್ಕೆ ಅಘೋಷಿತ ನಿಷೇಧ ಹೇರಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷರಾದ ಎಚ್‌.ಡಿ. ಜಯರಾಮು ಆಕ್ರೋಶ ವ್ಯಕ್ತಪಡಿಸಿದರು.

- Advertisement -
Screenshot 2024 12 14 20 54 40 86 6012fa4d4ddec268fc5c7112cbb265e7 1

ಅವರು ಮಂಡ್ಯ ನಗರದ ವಿ.ವಿ.ರಸ್ತೆಯಿಂದ ಜಿಲ್ಲಾಧಿಕಾರಗಳ ಕಚೇರಿವರೆಗೆ ಆಯೋಜಿಸಲಾಗಿದ್ದ ಬೈಕ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಬಾರಿ ನಮ್ಮ ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವನ್ನೂ ಕೊಡಲೇಬೇಕು. ಇಲ್ಲವಾದರೆ ನಮ್ಮ ಸಂಘಟನೆ ಸಮ್ಮೇಳನ ನಡೆಯುವ ಜಾಗದಲ್ಲಿ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂವಿಧಾನದ ಆರ್ಟಿಕಲ್ 51A(H) ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ಅಸಮಾನತೆಯ ಸುಧಾರಣೆಗಾಗಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡು ಬಗೆಯ ಆಹಾರವನ್ನು ಸೇವಿಸಲು ಅವಕಾಶ ನೀಡಬೇಕು ಎಂದು ಹೇಳಲಾಗಿದೆ. ಜನರ ತೆರಿಗೆ ಹಣದಲ್ಲಿ ನಡೆಯುವ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಸಂವಿಧಾನ ವಿರೋಧಿ ನಡೆಯಾಗುತ್ತದೆ. ಶುದ್ಧ ಸಸ್ಯಾಹಾರಿ ಸಮ್ಮೇಳನ ನಡೆಸುವುದು ಬಹು ಸಂಖ್ಯಾತರಿಗೆ ಮಾಡುವ ಅಪಮಾನ ಆಗಿದೆ ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಡಿಸಿ ಕಚೇರಿ ಮುಂದೆ ಗಾರೆಪರ ಮಾಡಿ ಪ್ರತಿಭಟಿಸಿದ ಪ್ರಗತಿಪರ ಸಂಘಟನೆಗಳು

ಈ ವಿಚಾರವಾಗಿ ಈಗಾಗಲೇ ಕಸಾಪ ಅಧ್ಯಕ್ಷರು ನಮಗು ಆಹಾರದ ವಿಚಾರಕ್ಕೂ ಸಂಬಂಧವಿಲ್ಲ. ಅದು ಸ್ವಾಗತ ಸಮಿತಿಗೆ ಬಿಟ್ಟ ವಿಚಾರ’ ಎಂದು ಹೇಳಿದ್ದಾರೆ. ಸಮ್ಮೇಳನಾಧ್ಯಕ್ಷರು ಕೂಡ ‘ಆಹಾರದ ವಿಚಾರದಲ್ಲಿ ಇರುವ ತಾರತಮ್ಯವನ್ನು ಸ್ವಾಗತ ಸಮಿತಿ ಕೊನೆಗಾಣಿಸಲಿ’ ಎಂದಿದ್ದಾರೆ. ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಎರಡೂ ಬಗೆಯ ಆಹಾರ ನೀಡದಿದ್ದರೆ ನಮ್ಮ ಸಂಘಟನೆ ಸಮ್ಮೇಳನದ ಆವರಣದಲ್ಲಿ ಮಾಂಸಾಹಾರ ಹಂಚಲಿದೆ ಎಚ್ಚರಿಕೆ ನೀಡಿದರು.

ಈ ಬೈಕ್ ರ್‍ಯಾಲಿಯ ಸಂದರ್ಭದಲ್ಲಿ ನ್ಯಾಯವಾದಿ ಬಿ.ಟಿ.ವಿಶ್ವನಾಥ್, ಕರುನಾಡ ಸೇವಕರು ಸಂಘಟನೆಯ ನಾಗಣ್ಣಗೌಡ, ನೆಲದನಿ ಬಳಗದ ಲಂಕೇಶ್, ದಸಂಸ ಎಂ.ವಿ.ಕೃಷ್ಣ, ಕರವೇ ಮುಖಂಡ ಹೆಚ್.ಡಿ. ಜಯರಾಂ, ಚಿತ್ರಕೂಟದ ಅರವಿಂದ ಪ್ರಭು ಸಮಾನ ಮನಸ್ಕರ ವೇದಿಕೆ ನರಸಿಂಹಮೂರ್ತಿ, ಪ್ರೊ.ಹುಲ್ಕೆರೆ ಮಹದೇವ, ಟಿ.ಡಿ.ನಾಗರಾಜು, ವಕೀಲ ಚೀರನಹಳ್ಳಿ ಲಕ್ಷ್ಮಣ್, ಜಾಗೃತ ಕರ್ನಾಟಕದ ನಗರಕೆರೆ ಜಗದೀಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...