ಖತರ್ನಾಕ್ ಬೈಕ್ ಕಳ್ಳನನ್ನು ಬಂಧಿಸಿರುವ ಚಿಂತಾಮಣಿ ನಗರ ಠಾಣೆ ಪೊಲೀಸರು, ಆರೋಪಿಯಿಂದ 12 ಲಕ್ಷ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಬಂಗಾರಪ್ಪ ಬಿನ್ ಸತ್ಯಪ್ಪ(28) ಕಳ್ಳತನ ಮಾಡಿರುವ ಆರೋಪಿ. ಖಚಿತ ಮಾಹಿತಿ ಮೇರೆಗೆ ಬಂಗಾರಪ್ಪನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಕಳ್ಳತನದ ಮಾಡಿರುವ ಕುರಿತು ಒಪ್ಪಿಕೊಂಡಿದ್ದಾನೆ. ಆತನು ನೀಡಿದ ಮಾಹಿತಿ ಮೇರೆಗೆ 12 ಲಕ್ಷ ರೂಪಾಯಿ ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಅತ್ತಿಬೆಲೆ, ಹೊಸಕೋಟೆ, ಚಿಂತಾಮಣಿ, ಮಾಲೂರು, ಕೋಲಾರ ಭಾಗದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರು ಪಲ್ಸರ್ ಬೈಕ್, ಎರಡು ಬುಲೆಟ್, ಮೂರು ಡಿಯೋ, ಒಂದು ಹೀರೋ ಹೊಂಡಾ ಸೇರಿದಂತೆ ಹನ್ನೆರಡು ಲಕ್ಷ ರೂಪಾಯಿ ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಬಾಗೇಪಲ್ಲಿ | ಲಂಚ; ಪುರಸಭೆ ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ
ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜಾ ಇಮಾಂ ಖಾಸಿಂರವರ ಮಾರ್ಗದರ್ಶನದಂತೆ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಮುರುಳೀಧರ ನೇತೃತ್ವದಲ್ಲಿ ನಗರ ಠಾಣೆ ಸಿಪಿಐ ವಿಜಿ ಕುಮಾರ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.