ಗೌರಿಬಿದನೂರು | 24 ಗಂಟೆಯಲ್ಲಿ ದ್ವಿಚಕ್ರ ವಾಹನ ಕಳ್ಳನ ಬಂಧನ; ಐಜಿಪಿ ಲಾಬುರಾಮ್ ಮೆಚ್ಚುಗೆ

Date:

ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು 24 ಗಂಟೆಯೊಳಗೆ ಪತ್ತೆಹಚ್ಚಿ ಬಂಧಿಸುವಲ್ಲಿ ಗೌರಿಬಿದನೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಕೇಂದ್ರ ವಲಯದ ಐಜಿಪಿ ಲಾಬುರಾಮ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

ಗೌರಿಬಿದನೂರು ನಗರದ ನಿವಾಸಿ ತನ್ವೀರ್‌ ಖಾನ್‌ ಎಂಬಾತ ಹಿರೇಬಿದನೂರಿನ ಡೈರಿ ಬಳಿಯ ಮರದ ಕೆಳಗೆ ಏ.24ರಂದು ತನ್ನ ಪ್ಯಾಷನ್‌ ಪ್ರೊ ಬೈಕ್‌ ನಿಲ್ಲಿಸಿದ್ದು, ಇದ್ದಕ್ಕಿದ್ದಂತೆ ಬೈಕ್‌ ಕಳ್ಳತನವಾಗಿತ್ತು. ಈ ಕುರಿತು ತನ್ವೀರ್‌ ಖಾನ್‌ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್‌ ಅಪರಾಧ ತಂಡ ಹಿಂದೂಪುರ, ಬೆಂಗಳೂರಿಗೆ ಹೋಗಿ ಆರೋಪಿಯ ಸುಳಿವನ್ನು ಪತ್ತೆಹಚ್ಚಿದ್ದರು. ಗೌರಿಬಿದನೂರು ನಗರದ ಮುದಗಾನಕುಂಟೆ ಕ್ರಾಸ್‌ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯನ್ನು ಹಿಡಿದು ವಿಚಾರನೆಗೊಳಪಡಿಸಿದ್ದು, ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...
IMG 20250425 WA0024

ಗೌರಿಬಿದನೂರು ನಗರದ ನದಿಗಡ್ಡೆ ನಿವಾಸಿ ಪ್ರಭು ಬಿನ್‌ ನರಸಿಂಹಮೂರ್ತಿ(24) ಕಳ್ಳತನದ ಆರೋಪಿ. ಆರೋಪಿಯಿಂದ ಸುಮಾರು 1.15 ಲಕ್ಷ ಮೌಲ್ಯದ ಒಟ್ಟು ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

IMG 20250425 WA0025

ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಗೌರಿಬಿದನೂರು ನಗರ ಎಸ್‌ಐ ಚಂದ್ರಕಲಾ, ಸಿಬ್ಬಂದಿಗಳಾದ ಶ್ರೀರಾಮಯ್ಯ, ಪುಷ್ಪ, ಶಿವಶೇಖರ್‌, ಮಹಂತೇಶ್‌, ಸಂತೋಷ್ ಮಾಳಗಿ,‌ ತಾಂತ್ರಿಕ ಸಿಬ್ಬಂದಿಯವರಾದ ರವಿಕುಮಾರ್‌, ಮುನಿಕೃಷ್ಣ ಅವರನ್ನು ಎಸ್ಪಿ ಕುಶಾಲ್‌ ಚೌಕ್ಸೆ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...