ಸಕಲೇಶಪುರ | ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ; ವಿಡಿಯೋ ವೈರಲ್ ಬಳಿಕ ನಾಲ್ವರ ವಿರುದ್ಧ FIR

Date:

ಹಾಸನ ಜಿಲ್ಲೆಯ ಸಕಲೇಶಪುರದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ‌ ನಡೆದಿದೆ.

- Advertisement -

ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ನಾಲ್ವರು ಪಿಕಪ್ ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಕಲೇಶಪುರ ತಾಲೂಕಿನ ವನಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟದಲ್ಲಿ ಜೂನ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೊಕ್ಕೊಟ್ಟಿನ ಪ್ರವಾಸಿಗರಾದ ಭುವಿತ್ ಪೂಜಾರಿ ಹಾಗೂ ಎಂಟು ಸಂಗಡಿಗರು ತಮ್ಮ ಬೈಕ್ ಗಳಲ್ಲಿ ಪಟ್ಲ ಬೆಟ್ಟಕ್ಕೆ ಹೋಗಿ, ಹಿಂದಿರುಗಿ ಬರುವಾಗ ಈ ಘಟನೆ ನಡೆದಿದೆ.

ಬೈಕ್ ಸವಾರರಿಗೆ ಬಾಡಿಗೆ ಜೀಪುಗಳ ಚಾಲಕರು ಹಾಗೂ ಮಾಲೀಕರ ತಂಡ ಬೈಕ್‌ಗಳಲ್ಲಿ ಹೋಗಬೇಡಿ ಅಂದಿದ್ದಾರೆ. ಬೆಟ್ಟಕ್ಕೆ ತೆರಳಬೇಕಾದರೆ ಬಾಡಿಗೆ ಜೀಪಿನಲ್ಲೇ ಹೋಗಬೇಕು. ಬೇರೆ ವಾಹನಗಳನ್ನು ಬಿಡುವುದಿಲ್ಲ ಎಂದು ಬೈಕ್ ಸವಾರರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಕೆಲವರು ಏಕಾಏಕಿ ಬೈಕ್ ಸವಾರ ಭುವಿತ್ ಪೂಜಾರಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯು ಭುವಿತ್ ಪೂಜಾರಿಯವರು ಹೆಲ್ಮೆಟ್‌ನಲ್ಲಿ ಧರಿಸಿದ್ದ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲೂ ಕೂಡ ವೈರಲಾಗಿದೆ.

ಹಲ್ಲೆಗೊಳಗಾದ ಭುವಿತ್ ಪೂಜಾರಿಯವರು ನೀಡಿದ ದೂರಿನ ಆಧಾರದಲ್ಲಿ ಗಗನ್, ಕಿರಣ್, ನಿಶಾಂತ್, ಮದನ್ ಎಂಬುವವರ ಮೇಲೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಕಳೆದ ಎರಡು ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಪತ್ರಕರ್ತರು ಪಟ್ಲ ಬೆಟ್ಟ ನೋಡಲು ವಾಹನ ನಿಲ್ಲಿಸಿ, ಬೆಟ್ಟ ನೋಡಿ ಹಿಂದಿರುಗಿ ಬರುವಷ್ಟರಲ್ಲಿ ಎರಡು ವಾಹನದ ಚಕ್ರವನ್ನು ಆಯುಧದಿಂದ ಕತ್ತರಿಸಿ ವಾಹನವನ್ನು ಜಖಂ ಮಾಡಲಾಗಿತ್ತು.

ಈ ಊರಿನ ಕೆಲವು ಕಿಡಿಗೇಡಿಗಳು ನಿರಂತರವಾಗಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸದಿದ್ದರೆ ಪ್ರವಾಸೋದ್ಯಮಕ್ಕೆ ಹೊಡೆತ ಬೀಳುವುದು ಖಂಡಿತ ಎಂಬ ಮಾತುಗಳು ಕೇಳಿಬಂದಿವೆ.

ಹೊರಗಿನ ವಾಹನ ಬಳಸದಂತೆ ಬೋರ್ಡ್ ಹಾಕಿರುವ ಗ್ರಾಮ ಪಂಚಾಯತ್

ವನಗೂರು ಗ್ರಾಮ ಪಂಚಾಯತ್‌ನ ಪಿಡಿಓ ಹಾಗೂ ಅಧ್ಯಕ್ಷರ ಹೆಸರಿನಲ್ಲಿ ಪಟ್ಲ ಬೆಟ್ಟಕ್ಕೆ ತೆರಳುವ ರಸ್ತೆಯ ಪ್ರವೇಶದ್ವಾರದಲ್ಲಿ ಹೊರಗಿನ ವಾಹನ ಬಳಸದಂತೆ ಬೋರ್ಡ್ ಹಾಕಲಾಗಿದೆ.

ವನಗೂರು

ಈ ಬೋರ್ಡಿನಲ್ಲಿ, ಪಟ್ಲಬೆಟ್ಟವು ಪ್ರಕೃತಿ ರಮಣೀಯ ಸ್ಥಳವಾಗಿದ್ದು, ಬೆಟ್ಟಕ್ಕೆ ತೆರಳಬೇಕಾದರೆ ಸ್ಥಳೀಯರ ವಾಹನಗಳನ್ನು ಬಳಸಬೇಕೇ ಹೊರತು, ಹೊರಗಿನ ವಾಹನಗಳಿಗೆ ತೆರಳಲು ಅವಕಾಶವಿಲ್ಲ” ಎಂದು ಸೂಚನೆ ನೀಡಲಾಗಿದೆ.

ಪಿಕಪ್ ವಾಹನ ಚಾಲಕರು ಹೇಳೋದೇನು?

ಪಿಕಪ್ ವಾಹನ ಚಾಲಕರು, ಖಾಸಗಿ ಕಾರು ಬೈಕ್‌ ಅನ್ನು ಪಟ್ಲ ಬೆಟ್ಟಕ್ಕೆ ತೆರಳದಂತೆ ತಡೆಯುತ್ತಿರುವುದಕ್ಕೆ ಕಾರಣಗಳನ್ನು ನೀಡಿದ್ದು, “ಪಟ್ಲ ಬೆಟ್ಟ ಒಂದು ಸುಂದರ ವೀಕ್ಷಣೆಯ ಸ್ಥಳ ನಿಜ. ಆದರೆ ಅದು ಸರ್ಕಾರಿ ಜಾಗದಲ್ಲಿದೆ. ಅರಣ್ಯ ಇಲಾಖೆಗೆ ಸೇರಿದ್ದು, ಪಟ್ಲ ಬೆಟ್ಟಕ್ಕೆ ತೆರಳಲು ಸರಿಯಾದ ದಾರಿಯನ್ನು ಅರಣ್ಯ ಇಲಾಖೆಯವರು ಮಾಡಿಸಿಲ್ಲ. ಸುತ್ತಮುತ್ತಲಿನ ಜೀಪ್ ಮಾಲೀಕರೇ ಸೇರಿಕೊಂಡು ಗ್ರಾಮ ಪಂಚಾಯತಿಯವರ ಸಹಕಾರದೊಂದಿಗೆ ಹಣ ಖರ್ಚು ಮಾಡಿ ರಸ್ತೆ ಮಾಡಿಸಿದ್ದೇವೆ. ಪಟ್ಲ ಬೆಟ್ಟವನ್ನು ಯಾವುದೇ ಇಲಾಖೆಯವರು ಅಭಿವೃದ್ಧಿ ಪಡಿಸಿಲ್ಲ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಅರಣ್ಯ ಇಲಾಖೆಯವರು  ಪಟ್ಲ ಬೆಟ್ಟಕ್ಕೆ ಸಾರ್ವಜನಿಕರು ಹೋಗದಂತೆ ನಿರ್ಬಂಧವಿಧಿಸಿದ್ದರು. ಆದರೆ ನಾವು ಸ್ಥಳೀಯ ಶಾಸಕರ ಬಳಿ ಮನವಿ ಮಾಡಿ, ಪಿಕಪ್ ವಾಹನ ಮಾಲೀಕರು ಹೊಟ್ಟೆಪಾಡಿಗೆ ದುಡಿಯಲು ಅವಕಾಶ ಸಿಕ್ಕಂತಾಗುತ್ತದೆ ಎಂದು ನಿರ್ಬಂಧ ತೆಗೆಸಿದ್ದೆವು. ಅಲ್ಲದೇ, ಪರಿಸರಕ್ಕೆ ಪ್ರವಾಸಿಗರಿಂದ ಹಾನಿಯಾಗದಂತೆ ನೋಡಿಕೊಳ್ಳುವುದಾಗಿ ಅರಣ್ಯ ಇಲಾಖೆಯವರಿಗೂ ಭರವಸೆ ಕೊಟ್ಟಿದ್ದೇವೆ. ಹಾಗಾಗಿ, ಅದನ್ನು ನಿರ್ವಹಿಸಲು ಅನುಮತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊರಗಿನಿಂದ ಬರುವ ವಾಹನಗಳನ್ನು ಬೆಟ್ಟಕ್ಕೆ ಹೋಗಲು ಬಿಡುತ್ತಿಲ್ಲ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...