ಬಿಂಡಿಗ ದೇವೀರಮ್ಮ ಉತ್ಸವ ಎರಡು ದಿನಗಳಿಗೆ ವಿಸ್ತರಣೆ, ರಾತ್ರಿ ದರ್ಶನಕ್ಕೆ ಅವಕಾಶವಿಲ್ಲ: ಎಸ್‌ಪಿ ವಿಕ್ರಮ ಅಮಟೆ

Date:

ಬೆಟ್ಟದ ತುದಿಯಲ್ಲಿ ವರ್ಷಕ್ಕೆ ಒಂದೇ ದಿನ ದರ್ಶನ ನೀಡುತ್ತಿದ್ದ ಬಿಂಡಿಗ ದೇವೀರಮ್ಮ ಉತ್ಸವವನ್ನು ಎರಡು ದಿನಗಳಿಗೆ ದೇಗುಲ ಸಮಿತಿ ವಿಸ್ತರಿಸಿದೆ. ಸಮಿತಿ ಪ್ರಕಾರವೇ ರಾತ್ರಿ ವೇಳೆ ದೇವಿಯ ದರ್ಶನಕ್ಕೆ ಅವಕಾಶವಿಲ್ಲ. ಆದ್ದರಿಂದ ರಾತ್ರಿ ವೇಳೆ ಭಕ್ತರು ಬೆಟ್ಟ ಏರುವುದನ್ನು ನಿಯಂತ್ರಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದರು.

- Advertisement -

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ಪ್ರತಿವರ್ಷದಂತೆ ನರಕ ಚತುರ್ದಶಿಯ ದಿನ(ಅ.20) ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿತ್ತು. ಈ ವರ್ಷ ಒಂದು ದಿನ ಮುನ್ನವೇ ಅವಕಾಶ ನೀಡಲಾಗುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ರಾತ್ರಿ ವೇಳೆ ಬೆಟ್ಟ ಏರುವ ಪ್ರಯತ್ನವನ್ನು ಯಾರೂ ಮಾಡಬಾರದು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಅಕ್ಟೋಬರ್‌ 19ರಂದು ಬೆಳಿಗ್ಗೆ 9ರಿಂದ ಬೆಟ್ಟದ ಮೇಲೆ ದೇವಿಯ ದರ್ಶನಕ್ಕೆ ಅವಕಾಶ ಇದೆ. ಅದಕ್ಕೂ ಮುನ್ನ 7 ಗಂಟೆಯ ಬಳಿಕ ಭಕ್ತರು ಬೆಟ್ಟ ಏರಲು ಅವಕಾಶ ನೀಡಲಾಗುವುದು. ಮಲ್ಲೇನಹಳ್ಳಿ ಮಾರ್ಗ, ಕೈಮರ ಮಾರ್ಗ ಮತ್ತು ಅರಿಶಿನಕುಂಟೆ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಿ ನಿಗದಿತ ಸಮಯದ ನಂತರ ಭಕ್ತರು ಸಾಗಲು ಅನುಕೂಲ ಮಾಡಲಾಗುವುದು” ಎಂದು ತಿಳಿಸಿದರು.

“ಮರುದಿನ ಅಕ್ಟೋಬರ್‌ 20ರಂದು ಬೆಳಿಗ್ಗೆ 7ರ ನಂತರ ದರ್ಶನಕ್ಕೆ ಅವಕಾಶ ನೀಡುವ ಬಗ್ಗೆ ಸಮಿತಿ ನಿರ್ಧರಿಸಿ ಆಹ್ವಾನ ಪತ್ರಿಕೆಯಲ್ಲೇ ಮುದ್ರಿಸಿದೆ. ಆದ್ದರಿಂದ ರಾತ್ರಿ ಬೆಟ್ಟ ಏರಿದರೆ ಭಕ್ತರಿಗೆ ಯಾವುದೇ ಪ್ರಯೋಜನ ಇಲ್ಲ. 7 ಗಂಟೆಯ ನಂತರ ಗುಡ್ಡದ ತುದಿ ತಲುಪಿದರೆ ಅನುಕೂಲವಾಗಲಿದೆ” ಎಂದು ಹೇಳಿದರು.

“ಮುನ್ನ ದಿನ ಬೆಟ್ಟ ಏರಿದವರು ಅಲ್ಲೇ ಉಳಿಯಲು ಅವಕಾಶ ನೀಡುವುದಿಲ್ಲ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಿದ್ದು, ವಾಪಸ್ ಕಳುಹಿಸಲಿದ್ದಾರೆ. ಸಮಯ ನಿಗದಿ ಮಾಡಿರುವುದು ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಲ್ಲ. ದೇಗುಲ ಸಮಿತಿ ಕೈಗೊಂಡಿರುವ ನಿರ್ಣಯದಂತೆ ಭದ್ರತೆ ಒದಗಿಸುವ ಜವಾಬ್ದಾರಿಯನ್ನಷ್ಟೇ ನಾವು ಮಾಡುತ್ತಿದ್ದೇವೆ” ಎಂದು ವಿವರಿಸಿದರು.

“ಬೆಟ್ಟದಲ್ಲಿ ಪಟಾಕಿ ಸಿಡಿಸದಂತೆ ಸೂಚನೆ ನೀಡಲಾಗಿದೆ. ಅದನ್ನೂ ಮೀರಿದರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲೆಡೆ ಡ್ರೋಣ್ ಮೂಲಕ ಪೊಲೀಸರು ನಿಗಾ ವಹಿಸಲಿದ್ದಾರೆ” ಎಂದು ತಿಳಿಸಿದರು.

“ಎರಡು ದಿನ ಭಕ್ತರು ಬೆಟ್ಟ ಏರುವುದರಿಂದ ಕಳೆದ ವರ್ಷಕ್ಕಿಂತ ಎರಡು ಪಟ್ಟು ಪೊಲೀಸ್ ಸಿಬ್ಬಂದಿಯನ್ನು ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ. ರಾತ್ರಿ ಕೂಡ ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಜಿಲ್ಲೆಯ ಸಿಬ್ಬಂದಿ ಜತೆಗೆ ಪಶ್ಚಿಮ ವಲಯದಿಂದ ಅಧಿಕಾರಿ ಮತ್ತು ಸಿಬ್ಬಂದಿ ಕರೆಸಲಾಗುತ್ತಿದೆ. 250 ಗೃಹ ರಕ್ಷಕ ದಳದ ಸಿಬ್ಬಂದಿಯನ್ನೂ ಕೂಡ ನಿಯೋಜಿಸಿಕೊಳ್ಳಲಾಗುತ್ತಿದೆ. ಸಿಬ್ಬಂದಿಗೆ ಆಹಾರದ ಕಿಟ್‌ಗಳನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಪ್ರವಾಸ: ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಭೇಟಿ

ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ, “ಅಕ್ಟೋಬರ್‌ 18 ಮತ್ತು 19ರಂದು ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾತ್ರಿ ವೇಳೆ ಮಳೆಯಲ್ಲಿ ಗುಡ್ಡದ ಮಧ್ಯದಲ್ಲಿ ಸಿಲುಕಿದರೆ ತೊಂದರೆಯಾಗಲಿದೆ. ಆದ್ದರಿಂದ ಹಗಲಿನಲ್ಲಿ ಬೆಟ್ಟ ಏರುವುದು ಸೂಕ್ತವೆಂಬ ನಿರ್ಧಾರವನ್ನು ಸಮಿತಿ ಕೈಗೊಂಡಿರುವ ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಅದರಂತೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ನಗರದಿಂದ ಹೋಗುವವರಿಗೆ ಹೆಚ್ಚುವರಿಯಾಗಿ 50 ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯ ಕಲ್ಪಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...