ರಾಜ್ಯದ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆಳೆದು ಬಂದ ಹಾದಿ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಈಗ ಕಾಂಗ್ರೆಸ್ ಸರ್ಕಾರದ ನೂತನ ಉಪಮುಖ್ಯಮಂತ್ರಿ. ಹೊಸ ಕಾಲಮಾನದ ರಾಜಕೀಯ ಘಟ್ಟದಲ್ಲಿ ಕಾಂಗ್ರೆಸ್‌ಗೆ ಹೊಸ ಎತ್ತರವನ್ನು ಕಲ್ಪಿಸಿಕೊಟ್ಟವರು ಡಿಕೆ ಶಿವಕುಮಾರ್. ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಬಳಿಕ ಪಕ್ಷವನ್ನು ಮತ್ತೊಂದು ಮಜಲಿಗೆ ಕೊಂಡೊಯ್ದ ನಾಯಕ ಡಿಕೆ ಶಿವಕುಮಾರ್. 

- Advertisement -

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹುಟ್ಟಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ. ಇವರ ತಂದೆ ಕೆಂಪೇಗೌಡ ಮತ್ತು ತಾಯಿ ಗೌರಮ್ಮ. 1962ರ ಮೇ 15ರಂದು ಜನಿಸಿದರು. 18ನೇ ವಯಸ್ಸಿನಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್ಎಸ್‌ಯುಐಗೆ ಸೇರ್ಪಡೆಯಾಗುವ ಮೂಲಕ ಪಕ್ಷ ರಾಜಕಾರಣದ ವ್ಯಾಪ್ತಿಗೆ ಬಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿದ್ಯಾಭ್ಯಾಸ

ಡಿಕೆ ಶಿವಕುಮಾರ್ ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದರು. ಆರ್ ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‌ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಮುಕ್ತ ವಿಶ್ವವಿದಾಲಯದಲ್ಲಿ ರಾಜಕೀಯ ಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ರಾಜಕೀಯ

1981ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಧುಮುಕಿದ ಶಿವಕುಮಾರ್, 1985ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನತಾ ಪಕ್ಷದ ಹಿರಿಯ ನಾಯಕ ಎಚ್.ಡಿ ದೇವೇಗೌಡರ ವಿರುದ್ಧ ಸ್ಪರ್ಧಿಸಿ, ಸೋತರು. 1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಯಾದರು. 1989ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಮೂಲಕ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಶಾಸಕರಾದರು.

D K Shivakumar

1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿ ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದರಲ್ಲಿ ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆ ಬಂಗಾರಪ್ಪ ಶಿವಕುಮಾರ್‌ಗೆ ಬಂದೀಖಾನೆ ಸಚಿವ ಸ್ಥಾನ ನೀಡಿದರು.

1994ರಲ್ಲಿ ಪಕ್ಷ ಟಿಕೆಟ್ ನೀಡಲಿಲ್ಲ. ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿದರು. ಎಸ್ ಎಂ ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕೆಲಸ ಮಾಡಿದರು. ಸಹಕಾರ ಸಚಿವರಾಗಿ, ನಗರಾಭಿವೃದ್ಧಿ ಖಾತೆ ಮತ್ತು ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದರು. (1999-2002).

2004ರಲ್ಲಿ ಡಿ ಕೆ ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರು. ಈ ವೇಳೆ ಪಕ್ಷ ಕಾಂಗ್ರೆಸ್ ಪಕ್ಷ ಬಹುಮತ ಗಳಿಸುವಲ್ಲಿ ವಿಫಲವಾಯಿತು. 2008ರಲ್ಲಿ ಮತ್ತೆ ಶಾಸಕರಾದರು. ಈ ವೇಳೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು.

2013ರಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂತು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರು. ಇಂಧನ ಸಚಿವರಾಗಿ ಡಿಕೆಶಿ ಕೆಲಸ ಮಾಡಿದರು.

ಈ ಸುದ್ದಿ ಓದಿದ್ದೀರಾ? ಪಕ್ಷಕ್ಕಾಗಿ ಉಪಮುಖ್ಯಮಂತ್ರಿ ಸ್ಥಾನ ಒಪ್ಪಿಕೊಂಡೆ : ಡಿ ಕೆ ಶಿವಕುಮಾರ್

2018ರಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಪಡೆಯಲಿಲ್ಲ. ಈ ವೇಳೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತು. ಜೆಡಿಎಸ್‌ನ ಎಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಈ ವೇಳೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾದರು. ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿತು.

2023ರಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಅಧಿಕಾರ ಗದ್ದುಗೆ ಹಿಡಿದಿದೆ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದು, ಡಿ ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...