ಬಿಟ್ ಕಾಯಿನ್ ಹಗರಣ | ಪಂಜಾಬ್‌ನ ಹ್ಯಾಕರ್ ರಾಜೇಂದ್ರ ಸಿಂಗ್‌ ಎಸ್‌ಐಟಿ ವಶಕ್ಕೆ

Date:

ಬಿಟ್ ಕಾಯಿನ್ ಹಗರಣ ಸಂಬಂಧ ಪಂಜಾಬ್‌ನ ಹ್ಯಾಕರ್ ರಾಜೇಂದ್ರ ಸಿಂಗ್‌ನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆಗೆ ರಾಜೇಂದ್ರ ಸಿಂಗ್ ಒಡನಾಟ ಹೊಂದಿದ್ದ. ಈತ ಬಿಟ್ ಕಾಯಿನ್ ಏಜೆನ್ಸಿ ಸರ್ವರ್ ಹ್ಯಾಕ್ ಮಾಡಿದ್ದಾನೆಂಬ ಮಾಹಿತಿ ಇದೆ. ಅಲ್ಲದೇ, ಹಲವು ಜಾಲತಾಣಗಳನ್ನು ಹ್ಯಾಕ್ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಶ್ರೀಕಿ ನೀಡಿದ ಮಾಹಿತಿ ಮೇರೆಗೆ ಪಂಜಾಬ್‌ಗೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ರಾಜೇಂದ್ರ ಸಿಂಗ್‌ನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶ್ರೀಕಿಗೂ ಮುನ್ನವೇ ಹ್ಯಾಕಿಂಗ್‌ನಲ್ಲಿ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರ ಸಿಂಗ್ ಕೈಚಳಕ ತೋರಿ ಭೂಗತವಾಗಿದ್ದ. ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಹ್ಯಾಕರ್ ರಾಜೇಂದ್ರ ಸಿಂಗ್‌ನನ್ನು ಬಂಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೋದಿ ನಿರಂಕುಶ ಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಭಾರಿ ಬೆಲೆ ತೆರಬೇಕಾಗಿದೆ: ಮುಖ್ಯಮಂತ್ರಿ ಚಂದ್ರು

ಈತ ಸರ್ಕಾರಿ ಹಾಗೂ ಖಾಸಗಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈತನಿಗಾಗಿ ಕೇಂದ್ರ ತನಿಖಾ ಸಂಸ್ಥೆಗಳು ಹುಡುಕಾಟ ನಡೆಸಿದ್ದವು. ಸಿಸಿಬಿ ಅಧಿಕಾರಿಗಳು ಶ್ರೀಕಿಯಿಂದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...