ಬಿಟ್ ಕಾಯಿನ್ ಹಗರಣ ಸಂಬಂಧ ಪಂಜಾಬ್ನ ಹ್ಯಾಕರ್ ರಾಜೇಂದ್ರ ಸಿಂಗ್ನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆಗೆ ರಾಜೇಂದ್ರ ಸಿಂಗ್ ಒಡನಾಟ ಹೊಂದಿದ್ದ. ಈತ ಬಿಟ್ ಕಾಯಿನ್ ಏಜೆನ್ಸಿ ಸರ್ವರ್ ಹ್ಯಾಕ್ ಮಾಡಿದ್ದಾನೆಂಬ ಮಾಹಿತಿ ಇದೆ. ಅಲ್ಲದೇ, ಹಲವು ಜಾಲತಾಣಗಳನ್ನು ಹ್ಯಾಕ್ ಮಾಡಿದ್ದಾರೆ ಎನ್ನಲಾಗಿದೆ.
ಶ್ರೀಕಿ ನೀಡಿದ ಮಾಹಿತಿ ಮೇರೆಗೆ ಪಂಜಾಬ್ಗೆ ತೆರಳಿದ್ದ ಎಸ್ಐಟಿ ಅಧಿಕಾರಿಗಳು ರಾಜೇಂದ್ರ ಸಿಂಗ್ನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ನಲ್ಲಿ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರ ಸಿಂಗ್ ಕೈಚಳಕ ತೋರಿ ಭೂಗತವಾಗಿದ್ದ. ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಹ್ಯಾಕರ್ ರಾಜೇಂದ್ರ ಸಿಂಗ್ನನ್ನು ಬಂಧಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮೋದಿ ನಿರಂಕುಶ ಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಭಾರಿ ಬೆಲೆ ತೆರಬೇಕಾಗಿದೆ: ಮುಖ್ಯಮಂತ್ರಿ ಚಂದ್ರು
ಈತ ಸರ್ಕಾರಿ ಹಾಗೂ ಖಾಸಗಿ ವೆಬ್ಸೈಟ್ಗಳನ್ನು ಹ್ಯಾಕ್ ಮಾಡುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈತನಿಗಾಗಿ ಕೇಂದ್ರ ತನಿಖಾ ಸಂಸ್ಥೆಗಳು ಹುಡುಕಾಟ ನಡೆಸಿದ್ದವು. ಸಿಸಿಬಿ ಅಧಿಕಾರಿಗಳು ಶ್ರೀಕಿಯಿಂದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದಾರೆ.