ಬೆಳಗಾವಿ | ಪಾಲಿಕೆಯಲ್ಲಿ ಕೈ-ಕಮಲ ಗುದ್ದಾಟ; ಪೌರ ಕಾರ್ಮಿಕರ ಪರದಾಟ

Date:

Advertisements

ಬೆಳಗಾವಿ ಮಹಾನಗರ ಪಾಲಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಜಗಳದಲ್ಲಿ ಪೌರ ಕಾರ್ಮಿಕರು ಬಡವಾಗಿದ್ದು, ಕಳೆದ ಒಂದು ವರ್ಷದಿಂದ ಸಂಬಳವಿಲ್ಲದೇ ಪರದಾಡುತ್ತಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ 138 ಪೌರ ಕಾರ್ಮಿಕರಿಗೆ ಕಳೆದ ಒಂದು ವರ್ಷದಿಂದ ಸಂಭಳವೇ ನೀಡಿಲ್ಲ. ನೇಮಕಾತಿಗೆ ಅನುಮತಿ ಸಿಗುವ ಮುನ್ನವೇ 138 ಜನ ಪೌರಕಾರ್ಮಿಕರನ್ನು ನಿಯಮ ಉಲ್ಲಂಘಿಸಿ ನೇಮಕ‌ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಆರೋಪ ಮಾಡಿದ್ದರು. ಇತ್ತ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ‘ನಾವು ಕಾನೂನುಬಾಹಿರವಾಗಿ ನೇಮಕ ಮಾಡಿಲ್ಲ’ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಹೀಗೆ, ಕಾಂಗ್ರೆಸ್‌-ಬಿಜೆಪಿ ನಾಯಕರ ಕಿತ್ತಾಟದಿಂದಾಗಿ ಪೌರ ಕಾರ್ಮಿಕರು ಸಂಬಳ ಆಗಿಲ್ಲ. ವೇತನಕ್ಕಾಗಿ ಒತ್ತಾಯಿಸಿ ಕೆಲಸಕ್ಕೆ ಗೈರಾಗುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗಾಗಿ ದೀಪಾವಳಿ ಹಬ್ಬಕ್ಕೂ ದೀಪ ಬೆಳಗಿಸಲೂ ತಮಗೆ ಆರ್ಥಿಕ ಶಕ್ತಿ ಇಲ್ಲದಂತಾಗಿದೆ ಎಂದು ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.

Advertisements

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ. ಬಿಜೆಪಿ 138ಪೌರ ಕಾರ್ಮಿಕರ ನೇಮಕಾತಿಯಲ್ಲಿ ಗೋಲ್ ನಡೆಸಿದೆ. ಪೌರಕಾರ್ಮಿಕರ ನೇಮಕಾತಿಯಲ್ಲಿ ಪೌರ ಕಾರ್ಮಿಕರಿಂದ ದುಡ್ಡು ವಸೂಲಿ ಮಾಡಿದವರು ಯಾರು? ನಗರವನ್ನು ಸ್ವಚ್ಛ ಮಾಡುವ ಶ್ರಮಿಕಲನ್ನು ಇಕ್ಕಟ್ಟಿಗೆ ಸಿಲುಕಿಸಿದವರು ಯಾರು? ಅವರ ವಿರುದ್ಧ ಬಿಜೆಪಿ ನಾಯಕರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಸಚಿವ ಹಾಗೂ ಪೌರಾಡಳಿತ ಸಚಿವರು ಇತ್ತೀಚಿಗೆ ಬೆಳಗಾವಿಗೆ ಬಂದು ಪಾಲಿಕೆ ಅಧಿಕಾರಿಗಳ ಜೊತೆ ಸಭೆ ಮಾಡಿ, ಪಾಲಿಕೆಯಲ್ಲಿ ನಡೆದಿರುವ ಪುಮಾದಗಳ ಬಗ್ಗೆ ಪಟ್ಟಿ ಮಾಡಿಕೊಂಡು ಹೋಗಿದ್ದು, 138 ಪೌರ ಕಾರ್ಮಿಕರ ನೇಮಕಾತಿ ವಿಚಾರ ಈಗ ಬಿಜೆಪಿಯನ್ನು ಇಟ್ಟಿಗೆ ಸಿಲುಕಿಸಿದೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X