ಕಲಬುರಗಿ: ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಿಜೆಪಿಯ ಮಾಜಿ ಶಾಸಕನ ಸಹೋದರ! 

Date:

ಕಲಬುರಗಿ ಜಿಲ್ಲೆಯ ಸೇಡಂನ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ.ಬಿ.ಪಾಟೀಲ್ ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿರುವ ಘಟನೆ ವರದಿಯಾಗಿದೆ. ಹುಟ್ಟುಹಬ್ಬ ಆಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲಾಗಿದೆ.

- Advertisement -

ಈ ಕುರಿತು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಘಟನೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಸಚಿವ ಖರ್ಗೆ, “ಇದು ʼಕಲಬುರಗಿ ರಿಪಬ್ಲಿಕ್ʼ ಮಾಡುವ ಪ್ರಯತ್ನವೇ? ಬಿಜೆಪಿಗರ ಪ್ರಕಾರ ಇದು ಗೂಂಡಾಗಿರಿಯ ವ್ಯಾಪ್ತಿಗೆ ಬರುವುದಿಲ್ಲವೇ?ಕಲಬುರಗಿ ರಿಪಬ್ಲಿಕ್ ಎನ್ನುತ್ತಿದ್ದ ಬೆಂಗಳೂರಿನ ಬಿಜೆಪಿ ನಾಯಕರು ತಮ್ಮದೇ ಪಕ್ಷದವರ ಈ ಕೃತ್ಯಕ್ಕೆ ಯಾವ ಸಮಜಾಯಿಷಿ ನೀಡುತ್ತೀರಿ?” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

“ಡಾ.ಅಂಬೇಡ್ಕರ್ ಅವರ ಫೋಟೋ ಕಾಲಿನ ಬುಡದಲ್ಲಿಟ್ಟು ತಲ್ವಾರ್ ಹಿಡಿದು ಕೇಕೆ ಹಾಕುತ್ತಿರುವ ಬಿಜೆಪಿಗರು ಗೂಂಡಾಗಿರಿ ಪ್ರದರ್ಶಿಸಿರುವುದಲ್ಲದೆ, ಬಾಬಾ ಸಾಹೇಬರ ಘನತೆಗೆ ಚ್ಯುತಿ ತಂದಿದ್ದಾರೆ. ಈ ತರಹ ಮಾಡಿ ಅಂಬೇಡ್ಕರ್ ವಿರೋಧಿ ಅಮಿತ್ ಶಾ ಅವರನ್ನು ಮೆಚ್ಚಿಸುವ ಪ್ರಯತ್ನ ಮಾಡ್ತಿದ್ದಾರಾ” ಎಂದು ಪ್ರಶ್ನೆ ಎತ್ತಿದ್ದಾರೆ.

“ಈ ಕೃತ್ಯಕ್ಕೆ ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರಾ ಅಥವಾ ಇಂತಹ ಘೋರ ಅಪರಾಧ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತಾರಾ? ಎಂದ ಅವರು,ಇದಕ್ಕಾಗಿ ಒಂದು ಸತ್ಯ ಶೋಧನ ಸಮಿತಿ ರಚಿಸಿಕೊಂಡು, ನಕಲಿ ಅಂಬೇಡ್ಕರ್ ವಾದಿಗಳಾದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರ ಜೊತೆಗೆ ಯಾವಾಗ ಕಲಬುರಗಿಗೆ ಬರುತ್ತೀರಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...