ಉಪ್ಪಾರ ಸಮಾಜದ ಏಕೈಕ ಶಾಸಕನನ್ನು ಸೋಲಿಸಲು ಹೊರಟಿತೆ ಬಿಜೆಪಿ?

Date:

ಚಾಮರಾಜನಗರದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಅವರನ್ನು ಸೋಲಿಸಲು ಬಿಜೆಪಿಯು ಹಣ ಮತ್ತು ಜಾತಿಯ ಬಲವಿರುವ ವಿ ಸೋಮಣ್ಣ ಅವರನ್ನು ಕರೆತಂದಿದೆ. ಅಸಂಘಟಿತ ಉಪ್ಪಾರ ಸಮುದಾಯದ ಏಕೈಕ ಶಾಸಕರನ್ನೂ ಶತಾಯಗತಾಯ ಸೋಲಿಸಲೇಬೇಕು ಎಂದು ಪ್ರಯತ್ನ ಪಡುತ್ತಿದೆ.

ಕರ್ನಾಟಕ ರಾಜ್ಯದಲ್ಲಿ 30 ಲಕ್ಷ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜ ಒಂದು ಅಸಂಗಟಿತ ಸಮುದಾಯ. ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದಿರುವ ಉಪ್ಪಾರ ಸಮಾಜವು ಎಸ್‌ಟಿ ಮೀಸಲಾತಿಗಾಗಿ ಹೋರಾಟ ಕೂಡ ಮಾಡುತ್ತಿದೆ.

- Advertisement -

30 ಲಕ್ಷ ಜನಸಂಖ್ಯೆ ಇರುವ ಉಪ್ಪಾರ ಸಮಾಜವು ರಾಜಕೀಯವಾಗಿ ಮುಂದೆ ಬರಲು ಸಾಕಷ್ಟು ಪ್ರಯತ್ನ ಪಟ್ಟರು ಅದು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿಯನ್ನು ಬಿಟ್ಟರೆ ಯಾರೊಬ್ಬರೂ ಈ ಸಮುದಾಯದವರು ಶಾಸಕರಾಗಿಲ್ಲ. ಕಾರಣ ಈ ಸಮುದಾಯದಲ್ಲಿ ಸಂಘಟನೆಯ ಕೊರತೆ ಎದ್ದು ಕಾಣುತ್ತಿದೆ. ಪುಟ್ಟರಂಗಶೆಟ್ಟಿಯವರು ಕಾಂಗ್ರೆಸ್‌ನಿಂದ ಮೂರು ಬಾರಿ ಶಾಸಕರಾಗಿದ್ದು, ಒಮ್ಮೆ ಸಚಿವರೂ ಆಗಿದ್ದರು. ಆದರೆ, ಬಿಜೆಪಿ ಆ ಒಬ್ಬ ಶಾಸಕನನ್ನು ಸೋಲಿಸಲು ಪ್ರಯತ್ನಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪುಟ್ಟರಂಗಶೆಟ್ಟಿ ಅವರನ್ನು ಸೋಲಿಸಲು ಬಿಜೆಪಿಯು ಹಣ ಮತ್ತು ಜಾತಿಯ ಬೆಂಬಲವಿರುವ ವಿ ಸೋಮಣ್ಣ ಅವರನ್ನು ಕ್ಷೇತ್ರಕ್ಕೆ ಕರೆತಂದಿದೆ. ಮೂರು ಬಾರಿ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರನ್ನು ಸೋಲಿಸುವುದು ಬಿಜೆಪಿಗೆ ಸುಲಭದ ಮಾತಲ್ಲ. ಆದರೆ, ಸಮುದಾಯದಿಂದ ಇರುವ ಏಕೈಕ ಶಾಸಕನನ್ನು ಬಿಜೆಪಿಯವರು ಸೋಲಿಸಲು ಹೊರಟಿರುವುದು ಉಪ್ಪಾರರನ್ನು ಕೆರಳಿಸಿದೆ.

ಅರಬಾವಿ, ಕಡೂರು, ಗೋಕಾಕ್, ಕುಷ್ಟಗಿ ಹಾಗೂ ರಾಜ್ಯದ 30 ಕ್ಷೇತ್ರಗಳಲ್ಲಿ ಉಪ್ಪಾರ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆ ಕ್ಷೇತ್ರಗಳಲ್ಲಿ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಉಪ್ಪಾರರು ಕೇಳಿಕೊಂಡಿದ್ದರೂ ಬಿಜೆಪಿಯವರು ಅವರನ್ನು ಪರಿಗಣಿಸಿಲ್ಲ.

ನೀವು ಟಿಕೆಟ್ ನೀಡದಿದ್ದರೂ ಪರವಾಗಿಲ್ಲ. ಇರುವ ಒಬ್ಬ ಶಾಸಕನನ್ನು ಸೋಲಿಸಲು ಹೊರಟಿರುವುದು ನಮ್ಮ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವೆಂದು ಉಪ್ಪಾರರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪುಟ್ಟರಂಗಶೆಟ್ಟಿ ಅವರ ವಿರುದ್ಧವಾಗಿ ಬಿಜೆಪಿಯು ಸೋಮಣ್ಣಗೆ ಟಿಕೆಟ್ ನೀಡುವ ಮೂಲಕ ರಾಜ್ಯದ ಉಪ್ಪಾರ ಮತದಾರರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಳವಣಿಗೆಯನ್ನು ನೋಡುತ್ತಿದ್ದರೆ ಉಪ್ಪಾರರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಒಂದು ಕ್ಷೇತ್ರ ಗೆಲ್ಲಲು ಹೋಗಿ  ಬಿಜೆಪಿ ತನ್ನ 10 ರಿಂದ 12 ಕ್ಷೇತ್ರಗಳನ್ನು ಕಳೆದುಕೊಳ್ಳಬಹುದು ಎಂದೂ ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...