ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ: ಬಿಜೆಪಿ ಐಟಿ ಸೆಲ್‌ನ ಪ್ರಖ್ಯಾತ್‌ ವಿರುದ್ಧ ದೂರು ದಾಖಲು

Date:

Advertisements

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ, ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್‌ನ ಪ್ರಖ್ಯಾತ್‌ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.‌ ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ ಪ್ರಖ್ಯಾತ್‌ ಬಿ.ಜೆ‌ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ವಾಟ್ಸ್ಆಪ್, ಫೇಸ್ ಬುಕ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಿಎಂ ಸಿದ್ದರಾಮಯ್ಯ ಕುರಿತು ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ ಎಂದು ಸುಳ್ಳು ಸಂದೇಶ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿ, ಸಮಾಜದ ಸ್ವಾಸ್ಥ ಕೆಡಿಸುತ್ತಿದ್ದಾನೆ. ಈ ಹಿಂದೆಯೂ ಈತ ಹಲವು ಬಾರಿ ರಾಷ್ಟ್ರ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಕುರಿತು ಅವಹೇಳನ ಪದಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಾ ಬಂದಿರುತ್ತಾನೆ ಎಂದು ತಿಳಿದುಬಂದಿದೆ. ಈ ಹಿಂದೆ ಈತನ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ಕೂಡಲೇ ಆತನನ್ನು ವಿಚಾರಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕಾರ್ಕಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ದೂರಿನಲ್ಲಿ ತಿಳಿಸಿದ್ದಾರೆ.

ಪತ್ರಕರ್ತರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದಲ್ಲಿ ಪ್ರಖ್ಯಾತ ಬಿ.ಜೆ‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಎಎಸ್ಪಿ ಅವರಿಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X