ದಾವಣಗೆರೆ | ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು BJP ಮುಖಂಡ ಆತ್ಮಹತ್ಯೆ

Date:

ತನ್ನ ಕಾರಿಗೆ ಪೆಟ್ರೋಲ್ ಸುರಿದು, ಅದರೊಳಗೆ ಕುಳಿತು ಬೆಂಕಿಹಚ್ಚಿಕೊಂಡು ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಮೃತದನ್ನು ದಾವಣರೆಗೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಕೋಳ್‌ ಚಂದ್ರಶೇಖರ್‌ (56) ಎಂದು ಗುರುತಿಸಲಾಗಿದೆ.

- Advertisement -

ದಾವಣೆಗೆರೆ ತಾಲೂಕಿನ ನಾಗನೂರು ಸಮೀಪದ ಬಿಸ್ಲೇರಿ ಗ್ರಾಮದ ತೋಟದಲ್ಲಿ ಸಂಕೋಳ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವು ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಂಕೋಳ್‌ ಸಾವಿನ ಸುದ್ದಿ ಕೇಳಿ, ಅವರ ಮಗ ಮತ್ತು ಮಗಳು ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಸಿಮೆಂಟ್ ಮತ್ತು ಕಬ್ಬಿಣದ ಅಂಗಡಿ ಇಟ್ಟುಕೊಂಡಿದ್ದ ಶಾಮನೂರು ಗ್ರಾಮದ ಸಂಕೋಳ್ ಅವರು ಈ ಹಿಂದೆ ಬಿಜೆಪಿ ಉಪಾಧ್ಯಕ್ಷರೂ ಆಗಿದ್ದರು. ಬಿಸ್ಲೇರಿ ಮತ್ತು ಶಾಮನೂರಿನಲ್ಲಿ ಆಸ್ತಿ ಹೊಂದಿದ್ದರು. 2007ರಲ್ಲಿ ಶಾಮನೂರು ಕ್ಷೇತ್ರದಿಂದ ಅವರು ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...