ಚುನಾವಣೆ 2023 | ‘ಕಮಲ’ ಬಿಟ್ಟು ‘ತೆನೆ’ ಹೊತ್ತ ಸೂರ್ಯಕಾಂತ ನಾಗಮಾರಪಳ್ಳಿ

Date:

  • ಬಿಜೆಪಿ ಟಿಕೇಟ್‌ ಕೈ ತಪ್ಪಿದ್ದರಿಂದ ಜೆಡಿಎಸ್‌ ಸೇರ್ಪಡೆ
  • 2009, 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು

ಬೀದರ್ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವೆದ್ದಿರುವ ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದಾರೆ. ಭಾನುವಾರ ರಾತ್ರಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್, ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.

2009ರ ಉಪಚುನಾವಣೆ ಮತ್ತು 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸೂರ್ಯಕಾಂತ ಎರಡು ಬಾರಿಯೂ ಸೋಲು ಕಂಡಿದ್ದರು. 2023ರಲ್ಲಿ ಶತಾಯಗತಾಯ ಗೆಲ್ಲಲೇಬೇಕು ಎಂದು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷ ಸಂಘಟಿಸಿದರು.‌ ಆದರೆ, ಬಿಜೆಪಿಯು ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಟಿಕೆಟ್ ಕೊಡಲು ನಿರಾಕರಿಸಿ ಇನ್ನೋರ್ವ ಟಿಕೆಟ್ ಆಕಾಂಕ್ಷಿ ಈಶ್ವರಸಿಂಗ್ ಠಾಕೂರ್‌ಗೆ ಟಿಕೆಟ್ ನೀಡಿದೆ.

ಇದರಿಂದ ಅಸಮಾಧಾನಗೊಂಡಿದ್ದ ಸೂರ್ಯಕಾಂತ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ, ಜೆಡಿಎಸ್ ಸೇರುವ ನಿರ್ಧಾರ ಮಾಡಿದ್ದರು. ಇದೀಗ ಜೆಡಿಎಸ್‌ ಸೇರಿದ್ದಾರೆ.

ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಜೆಡಿಎಸ್‌ ಹೊಸದೇನಲ್ಲ.‌ ಈ ಹಿಂದೆ, ಅವರ ತಂದೆ, ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರು ಜನತಾದಳದಲ್ಲಿದ್ದರು. 1989 ಮತ್ತು 1994ರಲ್ಲಿ ಔರಾದ ಕ್ಷೇತ್ರದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. 2008ರಲ್ಲಿ ಔರಾದ ಮೀಸಲು ಕ್ಷೇತ್ರವಾದ ನಂತರ ಗುರುಪಾದಪ್ಪ ನಾಗಮಾರಪಳ್ಳಿ ಕ್ಷೇತ್ರ ತೊರೆದು ಬೀದರ್ ಉತ್ತರ ಕ್ಷೇತ್ರ ಆಯ್ಕೆ ಮಾಡಿಕೊಂಡು ಗೆದ್ದಿದ್ದರು. ಇದೀಗ ಸೂರ್ಯಕಾಂತ ನಾಗಮಾರಪಳ್ಳಿ ಜನತಾ ಪರಿವಾರಕ್ಕೆ ಸೇರಿದ್ದಾರೆ.

ತ್ರಿಕೋನ ಸ್ಪರ್ಧೆ ಖಚಿತ

ಬೀದರ್ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುವುದು ಬಹುತೇಕ ಖಚಿತ ಎಂಬಂತಿದೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ರಹೀಂ ಖಾನ್, ಬಿಜೆಪಿಯಿಂದ ಈಶ್ವರಸಿಂಗ್ ಠಾಕೂರ್ ಹಾಗೂ ಜೆಡಿಎಸ್‌ನಿಂದ ಸೂರ್ಯಕಾಂತ ನಾಗಮಾರಪಳ್ಳಿ ನಡುವೆ ನೇರ ಹಣಾಹಣಿ ನಡೆಯುವುದು ಬಹುತೇಕ ಖಚಿತವಾಗಿದೆ.

ಹಿಂದೆ ಬೀದರ್ ಕ್ಷೇತ್ರಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪುರ್ ಅವರನ್ನು ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಎಂದು ಘೋಷಿಸಿತ್ತು. ಇದೀಗ ಸೂರ್ಯಕಾಂತ ನಾಗಮಾರಪಳ್ಳಿ ಜೆಡಿಎಸ್ ಸೇರ್ಪಡೆ ಹಿನ್ನೆಲೆ ಸೂರ್ಯಕಾಂತ ನಾಗಮಾರಪಳ್ಳಿ ಅವರೇ ಬೀದರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್ನುವುದು ಖಚಿತವಾಗಿದೆ.

ಈ ಸುದ್ದಿ ಓದಿದ್ದೀರಾ ? ದೇಶ ಮತ್ತು ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ : ರಾಹುಲ್ ಗಾಂಧಿ

ಒಮ್ಮೆಯೂ ಜೆಡಿಎಸ್ ಗೆಲ್ಲದ ಕ್ಷೇತ್ರದಲ್ಲಿ ಸೂರ್ಯಕಾಂತ ಗೆಲ್ಲುವರೇ?

ಬೀದರ್ ಉತ್ತರ ಕ್ಷೇತ್ರದಲ್ಲಿ ಇಲ್ಲಿಯವರೆಗೆ ನಡೆದ ಒಟ್ಟು ಚುನಾವಣೆಯಲ್ಲಿ ಜೆಡಿಎಸ್ ಖಾತೆ ತೆರೆದ ಉದಾಹರಣೆ ಇಲ್ಲ. ಕಾಂಗ್ರೆಸ್, ಜನಸಂಘ, ಪಕ್ಷೇತರ, ಬಿಎಸ್ ಪಿ ಹಾಗೂ ಬಿಜೆಪಿ ಅಭ್ಯರ್ಥಿಗಳಿಗೆ ನೆಲೆ ಕೊಟ್ಟ ಕ್ಷೇತ್ರದಲ್ಲಿ ಜನತಾ ಪರಿವಾರಕ್ಕೆ ಒಮ್ಮೆಯೂ ಅಧಿಕಾರ ಪಡೆಯಲು ಸಾಧ್ಯವಾಗಲಿಲ್ಲ. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಎಸ್‌ಪಿ ಗೆಲ್ಲಿಸಿ ರಾಜಕೀಯ ಲೆಕ್ಕಾಚಾರ ಉಲ್ಟಾ ಮಾಡಿದ ಜಾಣ ಮತದಾರರು ಈ ಬಾರಿ ಜೆಡಿಎಸ್ ಗೆಲ್ಲಿಸಿ ಹೊಸ ದಾಖಲೆ ಸೃಷ್ಟಿಸಿದರೂ ಅಚ್ಚರಿ ಪಡಬೇಕಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...