ಚಿಕ್ಕಬಳ್ಳಾಪುರ | ಆರ್.ಅಶೋಕ್‌, ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ : ಸಚಿವ ಕೃಷ್ಣ ಭೈರೇಗೌಡ

Date:

ಶಾಸಕ ಮುನಿರತ್ನ ಭ್ರಷ್ಟಾಚಾರ, ಅನ್ಯಾಯ, ಹನಿಟ್ರ್ಯಾಪ್‌ ಮಾಫಿಯಾ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಛೀಮಾರಿ

ಅತ್ಯಾಚಾರ, ಸೆಕ್ಸ್‌ ಹನಿಟ್ರ್ಯಾಪ್‌, ಏಡ್ಸ್‌ ಹರಡಿಸುವ ವ್ಯವಸ್ಥಿತ ಮಾಫಿಯಾದಲ್ಲಿ ಶಾಸಕ ಮುನಿರತ್ನ ಭಾಗಿಯಾಗಿದ್ದು, ಇಂತಹವರನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿಯ ಆರ್.ಅಶೋಕ್‌ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿಕಾರಿದರು.

- Advertisement -

ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜೋಡಿಗ್ರಾಮಗಳ ಪಹಣಿ ವಿತರಣೆ ಕಾರ್ಯಕ್ರಮದ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುನಿರತ್ನ ಭ್ರಷ್ಟಾಚಾರಿ ಎಂಬುದು ಎಲ್ಲರಿಗೂ ತಿಳಿದಿದ್ದ ವಿಚಾರ. ಅವರ ಮನೆಯಲ್ಲೇ ಬಿಬಿಎಂಪಿ ಬಿಲ್‌ ಬರೀತಾರೆ ಎಂಬುದು ಮೊದಲೇ ತಿಳಿದಿತ್ತು. ಗುತ್ತಿಗೆದಾರನ ಬಳಿ ಲಂಚ ಕೇಳಿರುವುದು, ಸರಕಾರಿ ಮಹಿಳಾ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು, ಅವರನ್ನು ಹೆದರಿಸಿ, ರಾಜಕಾರಣಿಗಳನ್ನ ಹನಿಟ್ರ್ಯಾಪ್‌ ಮಾಡಿರುವುದು ದೂರುಗಳಿಂದ ಬೆಳಕಿಗೆ ಬಂದಿದೆ ಎಂದರು.

ಬಿಜೆಪಿ ನಾಯಕರ ಕುಮ್ಮಕ್ಕು ಶಂಕೆ :
ವ್ಯವಸ್ಥಿತವಾದ ಏಡ್ಸ್‌ ಮತ್ತು ಹನಿಟ್ರ್ಯಾಪ್‌ ಮಾಫಿಯಾ ನಡೆಸುತ್ತಿದ್ದರು ಎಂಬುದು ನಿಜಕ್ಕೂ ಅಘಾತಕಾರಿ ವಿಚಾರವಾಗಿದ್ದು, ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತೆ ನೀಡಿದ ದೂರಿನಿಂದ ಇದು ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷದವರೇ ದೂರು ನೀಡಿದ್ದರೂ, ಮುನಿರತ್ನ ಅವರನ್ನ ಸಮರ್ಥಿಸಿಕೊಳ್ಳುತ್ತಿರುವುದನ್ನ ನೋಡಿದರೆ, ಈ ಎಲ್ಲಾ ಅಕ್ರಮಗಳಿಗೆ ಬಿಜೆಪಿ ನಾಯಕರೂ ಕುಮ್ಮಕ್ಕು ನೀಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಅಷ್ಟೇ ಅಲ್ಲ, ದಲಿತರ, ಒಕ್ಕಲಿಗರ ನಿಂದನೆ, ಸೆಕ್ಸ್‌ ಟ್ರ್ಯಾಪ್‌, ಏಡ್ಸ್‌ ಮಾಫಿಯಾ ಕುರಿತು ತನಿಖೆಯಾಗಬೇಕೆಂದು ಈಗಾಗಲೇ ಸಿಎಂ ಅವರೊಂದಿಗೆ ಚರ್ಚಿಸಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದರೆ ಸೂಕ್ತ ತನಿಖೆಯಾಗಬೇಕು. ಇದರಿಂದ ಸತ್ಯ ಹೊರಬರಬೇಕು ಎಂದರು.

ಡಿನೋಟಿಫಿಕೇಶನ್‌ ಹಗರಣ ಎಸ್.ಐ.ಟಿ ತನಿಖೆಯಾಗಲಿ :
ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರೂ ಸೇರಿ ಸ್ವಂತ ಲಾಭಕ್ಕಾಗಿ ಬೆಂಗಳೂರಿನ ಗಂಗೇನಹಳ್ಳಿಯಲ್ಲಿ ನೂರಾರು ಕೋಟಿ ಬೆಲೆಬಾಳುವ 1.11 ಎಕರೆ ಜಾಗವನ್ನು ಡಿನೋಟಿಫೀಕೇಶನ್‌ ಮಾಡಿಸಿಕೊಂಡು ಅವರ ಕುಟುಂಬಸ್ಥರ ಹೆಸರಿಗೆ ಮಾಡಿಸಿಕೊಂಡಿರುವ ಕುರಿತು ದಾಖಲೆ ಸಮೇತ ಮುಂದಿಟ್ಟಿದ್ದೇವೆ. ಪ್ರಧಾನ ಕಾರ್ಯದರ್ಶಿಯವರ ಹಿಂಬರಹವನ್ನು ಉಲ್ಲಂಘಿಸಿ ಡಿನೋಟಿಪೀಕೇಶನ್‌ ಮಾಡಿದ್ದಾರೆ. ಸತ್ತವರ ಹೆಸರಲ್ಲಿ ಡಿನೋಟಿಫಿಕೇಶನ್‌ ಮಾಡಿದ್ದಾರೆ. ಇದರ ಬಗ್ಗೆ ಅವರು ಉತ್ತರ ಕೊಡಲಿ ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್‌-ಮುನಿರತ್ನ ತೋರಿದ ಪಾತಕದ ಮಾದರಿ ಎಂಥವು? ಮಿಕ್ಕವರು ಅನುಸರಿಸಿದರೆ ಹೆಣ್ಣುಮಕ್ಕಳ ಪಾಡೇನು?

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌, ನಗರ ಶಾಸಕ ಪ್ರದೀಪ್‌ ಈಶ್ವರ್‌, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...