ತಮ್ಮ ತಿಮಿಂಗಿಲಗಳ ರಕ್ಷಣೆಗೆ ನಿಂತ ಅಶೋಕ್, ಅಶ್ವತ್ಥನಾರಾಯಣ‌, ಗೋಪಾಲಯ್ಯ: ಡಿಕೆ ಶಿವಕುಮಾರ್‌ ಆರೋಪ

Date:

  • ‘ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ’
  • ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರಿಂದ ಆರೋಪ’

ಕೆಂಪಣ್ಣ ಮಾತ್ರ ಅಲ್ಲ, ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಈ ವಿಚಾರ ರಾಜಕೀಯ ಮಾಡಿ, ಗುತ್ತಿಗೆದಾರರನ್ನು ಬಳಸಿಕೊಂಡು ಆರ್ ಅಶೋಕ್, ಅಶ್ವತ್ಥನಾರಾಯಣ‌ ಹಾಗೂ ಗೋಪಾಲಯ್ಯ ಅವರು ತಮ್ಮ ತಿಮಿಂಗಿಲಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಆರೋಪಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್‌ ಆರೋಪ ಮಾಡುತ್ತಿದ್ದಾರೆ. ಆದರೆ, ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಮುಖ್ಯಮಂತ್ರಿಯ ನಿರ್ದೇಶನದಂತೆ ಕಾಮಗಾರಿಗಳ ತನಿಖೆ ಮಾಡಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವವರಿಗೆ ಬಿಲ್‌ ಪಾವತಿ ಮಾಡಲಾಗುವುದು. ಯಾವುದೇ ಗುತ್ತಿಗೆದಾರರಿಗೆ ಕಿರುಕುಳ ನೀಡುವುದು ನಮ್ಮ ಉದ್ದೇಶವಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ

“ನಾವು ಭ್ರಷ್ಟಾಚಾರರಹಿತ ಆಡಳಿತ ನೀಡುವ ವಚನ ನೀಡಿ ಅಧಿಕಾರಕ್ಕೆ ಬಂದಿದ್ದು, ಪಾರದರ್ಶಕವಾಗಿ ಆಡಳಿತ ಮಾಡಲು ಬದ್ಧರಾಗಿದ್ದೇವೆ. ಕರ್ನಾಟಕವನ್ನು ದಕ್ಷ ಆಡಳಿತ ರಾಜ್ಯವಾಗಿ ಮಾಡುವುದು ನಮ್ಮ ಕನಸು. ಇದಕ್ಕಾಗಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ” ಎಂದರು.

“ಕೆಂಪಣ್ಣ ಅವರು ಬಹಳ ಹಿರಿಯ. ಅವರು ಬಿಜೆಪಿ ಸರ್ಕಾರ ಬಾಕಿ ಉಳಿಸಿರುವ ಬಿಲ್ ಪಾವತಿ ಬಗ್ಗೆ ಮನವಿ ಮಾಡಲು ನನ್ನನ್ನು ಭೇಟಿ ಮಾಡಿದ್ದರು. ಬಿಜೆಪಿ ಸರ್ಕಾರ ಯಾಕೆ ಬಿಲ್ ಪಾವತಿ ಮಾಡಲಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...