ಅಧಿವೇಶನ 2023 | ಸದನದಲ್ಲಿ ಪ್ರತಿಭಟಿಸಲು ಬಿಜೆಪಿ ಸದಸ್ಯರಿಗೆ ನಾಚಿಕೆಯಾಗಬೇಕು: ಶಿವಲಿಂಗೇಗೌಡ ತರಾಟೆ

Date:

  • ಕೊಬ್ಬರಿಗೆ ಮೊದಲು ಕೇಂದ್ರದಿಂದ ಬೆಂಬಲ ಬೆಲೆ ಕೊಡಿಸಿ: ಆಗ್ರಹ
  • ಬಿಜೆಪಿ ಸದಸ್ಯರಿಗೆ ರೈತರ ಬಗ್ಗೆ ಕಿಂಚತ್ತಾದರೂ ಕಾಳಜಿ ಇದೆಯಾ

ಕೊಬ್ಬರಿಗೆ ಬೆಂಬಲ ಬೆಲೆ ಸಿಗದೇ ರೈತರು ಸಾಯುತ್ತಿದ್ದಾರೆ. ಸದನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದರೆ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದಾರೆ. ಬೆಂಬಲ ಬೆಲೆ ಬಗ್ಗೆ ಮಾತನಾಡದೇ ಇರುವ ಬಿಜೆಪಿ ಸದಸ್ಯರಿಗೆ ನಾಚಿಕೆಯಾಗಬೇಕು. ನಿಮಗೆ ರೈತರ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದೆಯಾ ಎಂದು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ಪ್ರತಿಪಕ್ಷದ ಸದಸ್ಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

- Advertisement -

ಸದನ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಅವಧಿಗೆ ಬಿಜೆಪಿ ಸದಸ್ಯರು ಅಡ್ಡಿಯಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು 15 ನಿಮಿಷಗಳ ಮುಂದೂಡಿದ್ದರು. ನಂತರ ಸದನ ಆರಂಭವಾದರೂ ಬಿಜೆಪಿ ಸದಸ್ಯರು ಮಾತ್ರ ಸದನದ ಬಾವಿಯಿಂದ ತೆರಳದೇ ಪ್ರತಿಭಟನೆ ಮುಂದುವರಿಸಿದರು. ಬಿಜೆಪಿ ಪ್ರತಿಭಟನೆ ನಡುವೆಯೇ ಪ್ರಶ್ನೋತ್ತರ ಅವಧಿ ಮುಗಿಸಿದ ಸಭಾಧ್ಯಕ್ಷ ಯು ಟಿ ಖಾದರ್‌ ಶೂನ್ಯ ವೇಳೆ ಕೈಗೆತ್ತಿಕೊಂಡು ಶಾಸಕ ಕೆ ಎಂ ಶಿವಲಿಂಗೇಗೌಡ ಅವರಿಗೆ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಿಜೆಪಿ ಸದಸ್ಯರ ನಡವಳಿಕೆಗೆ ಗರಂ ಆದ ಶಿವಲಿಂಗೇಗೌಡ, “ಎಂಎಸ್‌ಪಿಗೆ ದರ ಕೊಟ್ಟಿದ್ದೀರಾ? ನಾಚಿಕೆ ಆಗಬೇಕು ನಿಮಗೆ. ಕೊಬ್ಬರಿ ಬೆಲೆ 6,800 ರೂ. ಆಗಿದೆ. ಜನ ಸುಮ್ಮನೇ ಇದ್ದಾರೆ ಎಂದರೆ ಅವರು ದಡ್ಡರಲ್ಲ. ಮೊದಲು ಬೆಂಬಲ ಬೆಲೆ ಬಗ್ಗೆ ಮಾತನಾಡಿ. ಇಲ್ಲಿ ಪ್ರತಿಭಟಿಸುವುದು ಸರಿಯಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಅಧಿವೇಶನ 2023 | ಪ್ರಶ್ನೋತ್ತರ ಕಲಾಪಕ್ಕೆ ಬಿಜೆಪಿ ಸದಸ್ಯರಿಂದ ಅಡ್ಡಿ, 15 ನಿಮಿಷ ಸದನ ಮುಂದೂಡಿಕೆ

ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಮಧ್ಯ ಪ್ರವೇಶಿಸಿ, “ಆಡಳಿತ ಪಕ್ಷದ ಸದಸ್ಯರಿಗೆ ಏಕಾಏಕಿ ಕೊಬ್ಬರಿ ಮೇಲೆ ಪ್ರೀತಿ ಬಂದಿದೆ. ಸರ್ಕಾರ ರಚಿಸಿದ ಮರುದಿನವೇ ಬೆಂಬಲ ಬೆಲೆ ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದು ಮರೆತಿದ್ದಾರೆ. ನಾನು ಈ ಬಗ್ಗೆ ನಿಲುವಳಿ ಸೂಚನೆ ಕೊಟ್ಟಿದ್ದೇನೆ. ಮೊದಲು ಆ ಬಗ್ಗೆ ಚರ್ಚೆಯಾಗಲಿ” ಎಂದು ತಿಳಿಸಿದರು.

ಆಡಳಿತ ಪಕ್ಷದ ಸದಸ್ಯರು ಮತ್ತು ಪ್ರತಿಪಕ್ಷದ ನಾಯಕರ ಮಧ್ಯೆ ಮಾತಿಗೆ ಮಾತು ಬೆಳೆಯುತ್ತಿದ್ದಂತೆ ಕುಮಾರಸ್ವಾಮಿ ತಮ್ಮ ಪಕ್ಷದ ಸದಸ್ಯರನ್ನು ಸದನದ ಬಾವಿಗೆ ಕರೆತಂದು, ಬಿಜೆಪಿ ಜೊತೆ ಪ್ರತಿಭಟನೆ ಮುಂದುವರಿಸಿದರು. ಸಭಾಧ್ಯಕ್ಷರು ಪ್ರತಿಪಕ್ಷಗಳ ವರ್ತನೆಗೆ ಬೇಸರಿಸಿ, ಸದನವನ್ನು 3 ಗಂಟೆಗೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...