ಪ್ರಧಾನಿ ಮೋದಿ ಮುಂದೆ ಬಿಜೆಪಿ ಸಂಸದರು ಬಾಯಿ ತೆಗೆಯಲು ಹೆದರುತ್ತಾರೆ: ಪ್ರಿಯಾಂಕ್‌ ಕಿಡಿ

Date:

  • ಪ್ರಧಾನಿಯವರು ಮಧ್ಯಪ್ರವೇಶಿಸಲಿ ಅಂತ ನಾವು ಆಗ್ರಹಿಸುತ್ತಿದ್ದೇವೆ
  • ಬಿಜೆಪಿಯವರಿಗೆ ಕನ್ನಡಿಗರ ಬಗ್ಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ

ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಮುಂದೆ ಬಾಯಿ ತೆಗೆಯಲು ಹೆದರುತ್ತಾರೆ. ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ. ಅವರು ಸಹಜವಾಗಿಯೇ ಕಾವೇರಿ ಬಗ್ಗೆ ಮಾತನಾಡುತ್ತಾರೆ. ಆದರೆ ಪ್ರಧಾನಿಯವರು ಮಧ್ಯಪ್ರವೇಶ ಮಾಡಲಿ ಅಂತ ನಾವು ಆಗ್ರಹಿಸುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಕಾವೇರಿ ವಿವಾದದ ವಿಚಾರವಾಗಿ ನಮ್ಮ‌ 25 ಮಂದಿ ಸಂಸದರು ಏಕೆ ಧ್ವನಿ ಎತ್ತುತ್ತಿಲ್ಲ? ಬಿಜೆಪಿಯವರಿಗೆ ಕನ್ನಡಿಗರ ಬಗ್ಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಸರ್ವ ಪಕ್ಷಗಳ ಸಭೆಯಲ್ಲಿ ಬಿಜೆಪಿ ಒಗ್ಗಟ್ಟಾಗಿರಬೇಕು ಎನ್ನುತ್ತಾರೆ. ಹೊರಗಡೆ ಬಂದು ಬೇರೆ ತರಹವೇ ಮಾತನಾಡುವುದು ಬಿಜೆಪಿಯವರಿಗೆ ಚಾಳಿಯಾಗಿಬಿಟ್ಟಿದೆ” ಎಂದು ಟೀಕಿಸಿದರು.

“ಸಿಎಂ, ಡಿಸಿಎಂ ಹೋಗಿ ಜಲಸಂಪನ್ಮೂಲ ಸಚಿವರ ಭೇಟಿ ಮಾಡುವಾಗ ಬಿಜೆಪಿ ಸಂಸದರಿಗೆ ಏನಾಗಿತ್ತು? ಬಿಜೆಪಿ ವರಿಷ್ಠರಿಗೆ ಬೇರೆ ರಾಜಕೀಯ ವಿಷಯಕ್ಕೆ ಭೇಟಿ ಮಾಡಲು ಸಮಯ ಸಿಗುತ್ತದೆ. ಆದರೆ ನೀರಿನ ವಿಚಾರದಲ್ಲಿ ಭೇಟಿ ಮಾಡಲು ಸಮಯ ಸಿಗೋದಿಲ್ವಾ”ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿರುವುದು ಸ್ಟಾಲಿನ್‌ರ ಗುಲಾಮ ಸರ್ಕಾರ : ನೀರು ಬಿಟ್ಟಿದ್ದಕ್ಕೆ ಬಿಜೆಪಿ ಟೀಕೆ

“ಬಸವರಾಜ ಬೊಮ್ಮಾಯಿಯವರಿಗೆ ಕಾವೇರಿ ವಿವಾದದ ಸಾಧಕ ಬಾಧಕ ಎಲ್ಲವೂ ಗೊತ್ತಿದೆ. ಆದರೂ ರಾಜಕೀಯ ಕಾರಣಕ್ಕೆ ಹೇಳಿಕೆ ಕೊಡುತ್ತಾರೆ. ಕಾವೇರಿ ವಿಚಾರದಲ್ಲಿ ನಾವು ಕಾನೂನಾತ್ಮಕವಾಗಿಯೇ ನಡೆದುಕೊಳ್ಳಬೇಕಿದೆ” ಎಂದರು.

“ರಾಜ್ಯ ಬಿಜೆಪಿ ನಾಯಕರು ಹಾಗೂ ತಮಿಳುನಾಡು ಸ್ಟೇಟ್ ಬಿಜೆಪಿಯವರ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು. ನಳಿನ್ ಕುಮಾರ್ ಕಟೀಲ್ ಹಾಗೂ ಅಣ್ಣಾಮಲೈ ಇಬ್ಬರೂ ಸೇರಿ ಪ್ರಧಾನಿ ಬಳಿ ಮಾತನಾಡಿ ಸಮಸ್ಯೆ ಬಗೆಹರಿಸಲಿ. ರಾಜ್ಯದ ಹಿತಾಸಕ್ತಿ ಕಾಪಾಡಲು ನಾವು ಸಿದ್ದವಾಗಿಯೇ ಇದ್ದೇವೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...