ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

Date:

  • ‘ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡ ಕೇಂದ್ರ ಬಿಜೆಪಿ’
  • ‘ಅಕ್ಕಿ ಇಟ್ಟುಕೊಂಡು ಕೊಡಲ್ಲ ಎಂದರೆ ಬಿಜೆಪಿಯದ್ದು ದುಷ್ಟ ರಾಜಕಾರಣ’

ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3,400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

“ಎಫ್‌.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಪೂರೈಕೆ ನಿರಾಕರಣೆ: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಿದ ಕೇಂದ್ರ ಸರಕಾರ

“ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಇಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ” ಎಂದಿದ್ದಾರೆ.

“ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನಃ ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....