ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ನಷ್ಟದ ಹಾದಿಯಲ್ಲಿದ್ದ ಸಾರಿಗೆ ಸಂಸ್ಥೆಗಳು ಈಗ ಲಾಭದ ದಾರಿಗೆ ಮರಳಿವೆ. ಪುರುಷ ಪ್ರಯಾಣಿಕರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಳವಾಗಿ ಸಾರಿಗೆ ಸಂಸ್ಥೆಗಳಿಗೆ ಆದಾಯ ಹರಿದುಬರುತ್ತಿದೆ. ಬಿಜೆಪಿಯ ಖಾಸಗೀಕರಣದ ಹುನ್ನಾರಕ್ಕೆ ನಷ್ಟದ ಕೂಪಕ್ಕೆ ಜಾರಿದ್ದ ಸಾರಿಗೆ ಸಂಸ್ಥೆಗಳು ಈಗ ತಲೆ ಎತ್ತಿ ಬೀಗುತ್ತಿವೆ” ಎಂದಿದೆ.
