ಒಳಮೀಸಲಾತಿ | ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲು: ಸಿಎಂ ಸಿದ್ದರಾಮಯ್ಯ ಟೀಕೆ

Date:

  • ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದ ಸಚಿವ ನಾರಾಯಣ ಸ್ವಾಮಿ
  • ‘ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ’
  • ‘ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ & ಸಂಘ ಪರಿವಾರ’

“ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ” ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು, ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

- Advertisement -

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣಸ್ವಾಮಿಯವರು ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದು ರಾಜ್ಯಸಭೆಗೆ ನೀಡಿರುವ ಉತ್ತರಕ್ಕೆ ಮುಖ್ಯಮಂತ್ರಿ ಅವರು ಗುರುವಾರ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಒಳಮೀಸಲಾತಿ ವಿಷಯ ವಿಚಾರಣೆ ಸುಪ್ರಿಂ ಕೋರ್ಟ್‌ನಲ್ಲಿದೆ. ಸುಪ್ರೀಂಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ವಿಷಯವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಮುಖ್ಯನ್ಯಾಯಮೂರ್ತಿಯನ್ನು ಕೋರಿದ್ದಾರೆ. ಇದರಿಂದಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ‘ಸಬ್ ಜುಡೀಸ್’ ಆಗುತ್ತದೆ ಎಂದು ಬಿಜೆಪಿ ಸದಸ್ಯ ಜಿ.ವಿ.ಎಲ್. ನರಸಿಂಹರಾವ್ ಅವರ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಸಚಿವ ನಾರಾಯಣಸ್ವಾಮಿ ಜಾರಿಕೊಂಡಿದ್ದಾರೆ” ಎಂದಿದ್ದಾರೆ.

“ಒಳಒಳಮೀಸಲಾತಿಗಾಗಿ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಈ ಉದ್ದೇಶಕ್ಕಾಗಿಯೇ ರಚಿಸಲಾಗಿರುವ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿತ್ತು. ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಲು ಕೋರಲಾಗಿತ್ತು. ಆದರೆ ಇಲ್ಲಿಯ ವರೆಗೆ 20 ರಾಜ್ಯ ಸರ್ಕಾರಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ತಮ್ಮ ಅಭಿಪ್ರಾಯ ತಿಳಿಸಿದೆ’’ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ʻಸದ್ಯದ ಸ್ಥಿತಿಯಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲʼ: ಕೇಂದ್ರ ಸಚಿವರ ಪ್ರತಿಕ್ರಿಯೆಗೆ ಹೋರಾಟಗಾರರ ಆಕ್ರೋಶ

“ಈ 20 ರಾಜ್ಯಗಳಲ್ಲಿ ಏಳು ರಾಜ್ಯಗಳು ಮಾತ್ರ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದ್ದು, ಉಳಿದ 13 ರಾಜ್ಯಗಳು ವಿರೋಧಿಸಿವೆ ಎಂದು ಹೇಳುವ ಮೂಲಕ ಬಹುಸಂಖ್ಯಾತ ರಾಜ್ಯಗಳು ಒಳಮೀಸಲಾತಿಗೆ ವಿರುದ್ಧವಾಗಿವೆ ಎಂಬ ಸೂಚನೆಯನ್ನೂ ಸಚಿವ ನಾರಾಯಣ ಸ್ವಾಮಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದ್ದು ನರೇಂದ್ರ ಮೋದಿ ಸರ್ಕಾರ ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದ ಬಿಜೆಪಿ ನಾಯಕರು ಯಾಕೆ ಆ ಸಮಯದಲ್ಲಿ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದಾಗಲಿ, ಈ ಬಗ್ಗೆ ಕೈಗೊಳ್ಳುವ ನಿರ್ಧಾರ ಸಬ್ ಜುಡಿಸ್ ಆಗುತ್ತದೆ ಎಂದಾಗಲಿ ಯಾಕೆ ಹೇಳಿಲ್ಲ” ಎಂದು ಪ್ರಶ್ನಿಸಿದ್ದಾರೆ.

“2020ರ ಆಗಸ್ಟ್ ತಿಂಗಳಲ್ಲಿಯೇ ಐವರು ನ್ಯಾಯಾಧೀಶರ ಪೀಠವು ಏಳು ನ್ಯಾಯಾಧೀಶರ ಪೀಠ ರಚಿಸುವಂತೆ ಕೋರಿಕೆ ಸಲ್ಲಿಸಿದ್ದರೂ ಇಲ್ಲಿಯ ವರೆಗೆ ಯಾಕೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿಲ್ಲ? ಇದೇ ವಿಷಯವನ್ನು ನಾವು ಪ್ರಶ್ನಿಸಿದಾಗ ಸಂವಿಧಾನಕ್ಕೆ ತಿದ್ದುಪಡಿ ಮಾಡದೆಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಸುಳ್ಳು ಭರವಸೆ ನೀಡಿದ್ದು ಯಾಕೆ?
ಬಹಿರಂಗವಾಗಿ ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರ, ಅಂತರಂಗದಲ್ಲಿ ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಉಪಕ್ರಮಗಳಿಗೆ ವಿರುದ್ಧವಾಗಿದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...

ಕೋಲಾರ | ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಶೇ 4 ಅರಣ್ಯ ಒತ್ತುವರಿ : ಸರೀನಾ ಸಿಕ್ಕಲಿಗರ್

ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ...