ರಾಜ್ಯದ ಲೂಟಿ, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳು ಮಾಡುವುದೇ ಬಿಜೆಪಿ ಕೆಲಸ: ಕೃಷ್ಣಭೈರೇಗೌಡ ಕಿಡಿ

Date:

Advertisements
  • ಪುನೀತ್ ಕೆರೆಹಳ್ಳಿ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಬೇಕಾ?
  • ಬಿಜೆಪಿಗರು ಗದ್ದಲ ಎಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಬೇಡಿ: ಸಭಾಪತಿ ಹೊರಟ್ಟಿ

ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಹಾಗೂ ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದಷ್ಟೇ ಬಿಜೆಪಿ ನಾಯಕರ ಕೆಲಸ ಎಂದು ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದರು.

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿ ಇತ್ತೀಚೆಗೆ ನೋಟೀಸ್ ಜಾರಿ ಮಾಡಿದ್ದರು. ಆ ನೊಟೀಸ್‌ನಲ್ಲಿ ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿತ್ತು.

ಬುಧವಾರ ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, “ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?” ಎಂದು ಆಕ್ರೋಶ ಹೊರಹಾಕಿದರು.

Advertisements

ಈ ವೇಳೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, “ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ.‌ ಸಂಬಂಧಪಟ್ಟ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.

ಆದರೆ ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ‘ಈಗಲೇ ಉತ್ತರ ಬೇಕು‌’ ಎಂದು ಪಟ್ಟುಹಿಡಿದರು. ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ “ಸದನದ ನಿಯನ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

ಸಭಾಪತಿ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿದರು. “ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು” ಎಂದು ಸೂಚಿಸಿದರು.

ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ‘ಸಚಿವರು ಈಗಲೇ ಉತ್ತರ ನೀಡಬೇಕು’ ಎಂದು ಪಟ್ಟು ಹಿಡಿದರು. ಇದರಿಂದಾಗಿ ಸದನದಲ್ಲಿ ಗದ್ದಲ ಉಂಟಾಗಿತ್ತು.

ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿ ಕಾರಿದ ಸಚಿವ ಕೃಷ್ಣಭೈರೇಗೌಡ, “ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇವರಿಗೆ ಸದನ ನಡೆಯುವುದು ಬೇಕಾಗಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರೂ ಸತ್ಯವೇನು ಎಂಬುದು ಜನರಿಗೆ ಗೊತ್ತು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X