ಬಿಕೆ ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊ‌ಲ್‌ಗೆ ಸಿಂಗಪುರ ಕಥೆ: ಬಸವರಾಜ ಬೊಮ್ಮಾಯಿ

Date:

  • ‘ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ನಮ್ಮ ಹೈಕಮಾಂಡ್‌ ಆಲೋಚಿಸಿಲ್ಲ’
  • ಸಚಿವರುಗಳ ವಿರುದ್ಧ ಶಾಸಕರೇ ಅಸಮಾಧಾನ ಹೊರ ಹಾಕಿದ್ದಾರೆ

ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದೆ. ಬಿ‌ ಕೆ ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಿಂಗಪುರ ಕಾರ್ಯತಂತ್ರದ ಕಥೆ ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸಿಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ” ಎಂದರು.

“ಸಿದ್ದರಾಮಯ್ಯ ಗ್ಯಾರಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿ ಹೇಳಿದ್ದಾರೆ. ಸಚಿವರುಗಳ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ವತಃ ಡಿ.ಕೆ ಶಿವಕುಮಾರ್ ಅವರೇ ಮುಂದೆ ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಇದು ಅವರಲ್ಲಿಯೇ ಸಮಾಧಾನ ಇಲ್ಲ ಎನ್ನುವುದು ತೋರಿಸಿದ್ದಾರೆ‌. ಬಿಜೆಪಿಯ ಹೈಕಮಾಂಡ್ ಈ ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಭಿನ್ನಾಭಿಪ್ರಾಯ ಸತ್ಯ

“ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಸತ್ಯ. ಡಿ ಕೆ ಶಿವಕುಮಾರ್ ಸರ್ಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದರೂ ಸಿಎಂಗೆ ಮಾಹಿತಿ ಇಲ್ಲ ಎಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲ ಅಂತ ಅರ್ಥ” ಎಂದು ಅಭಿಪ್ರಾಯ ಪಟ್ಟರು.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈನ ಮುನಿ ಹತ್ಯೆಯಿಂದ ಹಿಡಿದು ನಿತ್ಯ ಕೊಲೆ ನಡೆಯುತ್ತಿವೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ನ್ಯಾಯಾಧೀಶರಿಗೆ ಅಂತಾರಾಷ್ಟ್ರೀಯ ಮಟ್ಟದ ಕೊಲೆ ಬೆದರಿಕೆ ಬರುತ್ತಿದೆ. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲದಿದ್ದರೆ ಬೇರೆಯವರಿಗೆ ಹೇಗೆ ರಕ್ಷಣೆ ನೀಡುತ್ತಾರೆ” ಎಂದು ಪ್ರಶ್ನಿಸಿದರು.

“ಗ್ಯಾರಂಟಿ ಜಾರಿ ಮಾಡುವ ನೆಪದಲ್ಲಿ ನಮ್ಮ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ರೈತ ವಿದ್ಯಾನಿಧಿ, ಭೂ
ರೈತಶಕ್ತಿ, ಭೂಸಿರಿ, ರೈತರಿಗೆ ನೀಡಿದ್ದ ಜೀವನ ಜ್ಯೋತಿ ವಿಮೆ ಯೋಜನೆ ಸೆರಿದಂತೆ ಎಲ್ಲ ಯೋಜನೆಗಳನ್ನು ನಿಲ್ಲಿಸಿದ್ದಾರೆ‌. ಕೃಷಿ ಇಲಾಖೆಯಲ್ಲಿ 4,500 ಕೊಟಿ ರೂ.‌ ನೀರಾವರಿ ಇಲಾಖೆಯಲ್ಲಿ 3,500 ಕೊಟಿ ರೂ. ಕಡಿತ ಮಾಡಿದ್ದಾರೆ.‌ ಈ ಸರ್ಕಾರ ಗ್ಯಾರಂಟಿಗಳನ್ನೂ ಸಂಪೂರ್ಣವಾಗಿ ಜಾರಿ ಮಾಡುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದಿರುವುದರಿಂದ ಶಾಸಕರು ಅಸಮಾದಾನಗೊಂಡಿದ್ದಾರೆ” ಎಂದರು.

ನೈಸ್ ಅಕ್ರಮದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನೈಸ್ ಅಕ್ರಮದ ಬಗ್ಗೆ ಈಗಾಗಲೇ ಸದನ ಸಮಿತಿ ನೀಡಿರುವ ವರದಿ ಆಧರಿಸಿ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳಬೇಕು ಅಂತ ಆಗ್ರಹಿಸಿದ್ದೇವೆ. ಅಲ್ಲದೇ ಹೆಚ್ಚಿಗೆ ಸಂಗ್ರಹಿಸಿರುವ ಟೋಲ್ ವಶಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೀದರ್‌ | ಕಾಂಗ್ರೆಸ್‌ನಿಂದ ಮಾದಿಗ ಸಮುದಾಯದ ಕಡೆಗಣನೆ: ಫರ್ನಾಂಡಿಸ್‌ ಹಿಪ್ಪಳಗಾಂವ್

2‌023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ...