ಪಕ್ಷಕ್ಕಾಗಿ ನಾಲ್ಕು ದಶಕಗಳ ಕಾಲ ದುಡಿದ ದೇವರಾಜ್ ಗೆ ಜೆಡಿಎಸ್ ವರಿಷ್ಠರಿಂದ ದ್ರೋಹ: ಕಾಂಗ್ರೆಸ್ ಸೇರುವುದಾಗಿ ಘೋಷಣೆ

Date:

ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಆರ್‌ ಪೇಟೆಯ ಬಿ.ಎಲ್‌ ದೇವರಾಜು ಅವರು ಪಕ್ಷ ತೊರೆದಿದ್ದು, ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದ ದೇವರಾಜು ಅವರು 2023ರ ವಿಧಾನಸಭಾ ಚುನಾವಣೆಗೆ ಕೆಆರ್‌ ಪೇಟೆಯಲ್ಲಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷದ ವರಿಷ್ಠರು ಅವರಿಗೆ ಟಿಕೆಟ್‌ ನೀಡದ್ದರಿಂದ ಬಂಡಾಯವೆದ್ದಿದ್ದರು. ಇದೀಗ ಪಕ್ಷ ತೊರೆಯಲು ಸಜ್ಜಾಗಿದ್ದಾರೆ.

ಶುಕ್ರವಾರ ಕೆಆರ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವರಾಜು, ಪಕ್ಷವನ್ನು ತೊರೆಯುವುದಾಗಿ ತಿಳಿಸಿದ್ದಾರೆ. “ಜನತಾ ಪಕ್ಷ ಹುಟ್ಟಿಕೊಂಡಾಗಿನಿಂದ ಜನತಾಪಕ್ಷ, ಜನತಾದಳ, ಜೆಡಿಎಸ್‌ನಲ್ಲಿ ನಿಷ್ಠೆಯಿಂದ ದುಡಿದಿದ್ದೇನೆ. ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದೇನೆ. 2018ರ ಚುನಾವಣೆಯಲ್ಲಿ ಕೆ.ಸಿ ನಾರಾಯಣಗೌಡ ಹಾಗೂ ನನಗೆ ಸಿ ಫಾರಂ ಕೊಟ್ಟರು. ನಂತರ ನನ್ನ ನಾಮಪತ್ರ ತಿರಸ್ಕೃತವಾಯಿತು. 2004, 2013ರ ಚುನಾವಣೆಗಳಲ್ಲೂ ನಾನು ಟಿಕೆಟ್‌ ವಂಚಿತನಾಗಿದ್ದೆ” ಎಂದು ಬೇಸರ ವ್ಯಕ್ತಪಡಿಸಿದರು.

“2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಆಗ ಕೇವಲ 5 ಸಾವಿರ ಮತಗಳ ಅಂತರದಿಂದ ಸೋತಿದ್ದೆ. ಆ ಚುನಾವಣೆಯಲ್ಲಿ ಎಚ್‌.ಡಿ ಕುಮಾರಸ್ವಾಮಿ ತಮ್ಮ ಪರವಾಗಿ ಒಂದೇ ಒಂದು ದಿನ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿದ್ದರೂ ನಾನು ಸೋಲುತ್ತಿರಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಇದು ನನ್ನ ಕೊನೆಯ ಚುನಾವಣೆ. ಈ ಬಾರಿ ಟಿಕೆಟ್‌ ನೀಡುವಂತೆ ಜೆಡಿಎಸ್‌ ನಾಯಕರಲ್ಲಿ ಕೇಳಿಕೊಂಡಿದ್ದೆ. ಆದರೆ, ಅವರು ನನಗೆ ಟಿಕೆಟ್‌ ಕೊಡಲಿಲ್ಲ. ಬದಲಾಗಿ, ಇತ್ತೀಚೆಗಷ್ಟೇ ಪಕ್ಷ ಸೇರಿದ ಎಚ್‌.ಟಿ ಮಂಜುಗೆ ಟಿಕೆಟ್‌ ನೀಡಿದ್ದಾರೆ. ಮತ್ತೆ ನನಗೆ ಅನ್ಯಾಯ ಮಾಡಿದ್ದಾರೆ” ಎಂದು ಆರೋಪಿಸಿದರು.

“ಪಕ್ಷದ ನಡೆಯಿಂದ ನನ್ನ ಬೆಂಬಲಿಗರೂ ಅಸಮಾಧಾನಗೊಂಡಿದ್ದಾರೆ. ಅವರೆಲ್ಲರ ತೀರ್ಮಾನದಂತೆ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದೇನೆ. ಮಾರ್ಚ್‌ 27ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸೇರುತ್ತೇನೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ ಪರಿಹರಿಸುವ ಚರ್ಚೆಗಳಿಗೆ ಸದನದಲ್ಲಿ ಪ್ರಾಮುಖ್ಯತೆ ನೀಡಿ; ಎಎಪಿ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ 16ನೇ ವಿಧಾನಸಭೆಯ ವಿಧಾನ ಮಂಡಲಗಳ ಚಳಿಗಾಲದ...

ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ...

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...