ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.
ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್‌ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ ಆರ್ಮಿ, ಎನ್.ಸಿ.ಸಿ ನೇವಿ, ರೇಂಜರ್ಸ್ ರೋಡ್, ರೋರ‍್ಸ್, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರಾಮು. ಎಲ್. ವಹಿಸಿದ್ದರು. ಕುಂದಾಪುರ ರೆಡ್‌ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ರಕ್ತದಾನದ ಮಹತ್ವವನ್ನು ವಿವರಿಸಿದರು.
ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು
ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಯುವ ರೆಡ್‌ಕ್ರಾಸ್ ಸಂಯೋಜಕಿ ಅನುಷಾ ಕೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಮ ಕೆ. ಸ್ವಾಗತಿಸಿ, ವಿದ್ಯಾರ್ಥಿನಿ ರತ್ನಶ್ರೀ ನಿರೂಪಿಸಿ, ಕ್ಷಮಾ ವಂದಿಸಿದರು.
