ಉಡುಪಿ | ಯುವಜನತೆಯಲ್ಲಿ ರಕ್ತದಾನದ ಪ್ರಜ್ಞೆ ಬೆಳೆಸುವುದು ಅಗತ್ಯ: ಡಾ.ಸುರೇಶ್ ಶೆಣೈ

Date:

ರಕ್ತ ಅಂದರೆ ಜೀವ. ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಯುವಜನತೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿ ಅವರಲ್ಲಿ ರಕ್ತದಾನದ ಪ್ರಜ್ಞೆಯನ್ನು ಬೆಳೆಸಬೇಕು. ರಕ್ತದಾನದಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಅಧ್ಯಕ್ಷ ಡಾ.ಸುರೇಶ್ ಶೆಣೈ ಹೇಳಿದ್ದಾರೆ.

- Advertisement -

ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ಮಂಗಳವಾರ ಆಯೋಜಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1004335346

ಕೆಎಂಸಿ ಬ್ಲಡ್ ಸೆಂಟರ್‌ನ ಮುಖ್ಯಸ್ಥೆ ಡಾ.ಶಮೀ ಶಾಸ್ತ್ರೀ ಮಾತನಾಡಿ, ರಕ್ತದಾನ ಎಂಬುದು ಪುಣ್ಯದ ಕೆಲಸ. ಒಬ್ಬ ರಕ್ತದಾನ ಮಾಡುವುದರಿಂದ 3-4 ಮಂದಿಯ ಜೀವ ಉಳಿಸಬಹುದಾಗಿದೆ. ಪ್ರತಿದಿನ ನಮ್ಮ ಕೇಂದ್ರದಲ್ಲಿ 100-150 ಮಂದಿ ರಕ್ತದಾನ ಮಾಡುತ್ತಿದ್ದು, ಅವರಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವವರು ಕೇವಲ ಶೇ.10ರಷ್ಟು ಮಾತ್ರ. ಆದುದರಿಂದ ರಕ್ತದಾನ ಕುರಿತು ಜನರಲ್ಲಿರುವ ತಪ್ಪು ಕಲ್ಪನೆ ದೂರ ಮಾಡಬೇಕಾಗಿದೆ ಎಂದರು.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ವೌಲಾ ಮಾತನಾಡಿ, ವೈದ್ಯಕೀಯ ಕ್ಷೇತ್ರ ಸಾಕಷ್ಟು ಮುಂದುವರೆದರೂ ಈವರೆಗೆ ರಕ್ತಕ್ಕೆ ಪರ್ಯಾಯವಾಗಿ ಕೃತಕ ರಕ್ತವನ್ನು ಸೃಷ್ಠಿ ಮಾಡಲು ಯಾರಿಗೂ ಸಾಧ್ಯವಾಗಲಿಲ್ಲ. ಮನುಷ್ಯ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರಿಂದ ಮಾತ್ರ ಈ ಕೊರತೆ ನಿಗೀಸಲು ಸಾಧ್ಯ. ರಕ್ತದಾನ ಎಂಬುದು ಸಾಮಾಜಿಕ ಜವಾಬ್ದಾರಿ ಆಗಬೇಕು ಎಂದು ಅಭಿಪ್ರಾಯ ಪಟ್ಟರು.

ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಮುಖ್ಯ ಅತಿಥಿಗಳಾಗಿದ್ದರು. ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ಉಪಸ್ಥಿತರಿದ್ದರು. ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿಸಿದರು. ರಿಯಾಝ್ ಕುಕ್ಕಿಕಟ್ಟೆ ಕಿರಾತ್ ಪಠಿಸಿ, ವಂದಿಸಿದರು. ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...