ಹೆಬ್ಬಾಳ ಫ್ಲೈಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್ ಒಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳವಾರ ಹೆಬ್ಬಾಳ ಫ್ಲೈಓವರ್ ಮೇಲೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇಬ್ಬರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ.
ಬಳಿಕ ಬಸ್ ನಿಯಂತ್ರಣ ತಪ್ಪಿ ಮುಂದೆ ಸಾಗಿ ದಾರಿಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನು ಓದಿದ್ದೀರಾ? ಬೆಂಗಳೂರು | ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್; ತಪ್ಪಿದ ಅನಾಹುತ
ಸದ್ಯ ಈ ಅಪಘಾತದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಸ್ ನಾಲ್ಕು ಕಾರು, ನಾಲ್ಕು ಬೈಕಿಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿದೆ.
BMTC Volvo Bus Involved in Serial Accident on Hebbal Flyover, #Bangalore@BlrCityPolice @BMTC_BENGALURU pic.twitter.com/5RTCEYeJAi
— The Vocal News (@thevocalnews) August 13, 2024
A Horrific Accident In #Bengaluru As a #BMTC A/C Volvo Bus Lost Control and Rammed Into Several Vehicles Near #Hebbal.
— Urooj Turabi (@uroojturabi5) August 13, 2024
CCTV Footage Shows The #Bus Hitting 4 Cars and 4 Bikes, Leaving 2 Injured. #Karnataka #BengaluruNews pic.twitter.com/W5giE2rsH0