ಗೋವಾ ಕಡಲಿನಲ್ಲಿ ಕಾರವಾರದ ಬೋಟ್ ಮುಳುಗಡೆ; 22 ಮೀನುಗಾರರು ಪಾರು

Date:

ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಬೋಟ್ ಒಂದು ಗೋವಾದ ಸಮುದ್ರ ವ್ಯಾಪ್ತಿಯಲ್ಲಿ ಮುಳುಗಡೆಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

- Advertisement -

ಘಟನೆಯ ವಿವರ: ಕಾರವಾರದ ಮುದಗಾ ಬಂದರಿನಿಂದ ಸುಮಾರು ಒಂದು ವಾರದ ಹಿಂದೆ ದಿನೇಶ್ ಕಾಂಚನ್ ಎಂಬುವವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಪರ್ಷಿಯನ್ ಮಾದರಿಯ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಬೋಟ್ ಜಲಸಮಾಧಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್ ಭವಿಷ್ಯಕ್ಕೆ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಬೋಟ್ ಮುಳುಗುತ್ತಿದ್ದ ಸಂದರ್ಭದಲ್ಲಿ ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇತರ ಬೋಟ್‌ಗಳ ಮೀನುಗಾರರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಸಮಯಪ್ರಜ್ಞೆ ಮೆರೆದ ಸಹ-ಮೀನುಗಾರರು, ಮುಳುಗುತ್ತಿದ್ದ ಬೋಟ್‌ನಲ್ಲಿದ್ದ ಎಲ್ಲಾ 22 ಸಿಬ್ಬಂದಿಯನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಖನಿಜ ಸಂಪತ್ತಿನ ಪತ್ತೆಗೆ ವೈಮಾನಿಕ ಸಮೀಕ್ಷೆ: ಕಡಿಮೆ ಎತ್ತರದಲ್ಲಿ ವಿಮಾನ ಹಾರಾಟ, ಆತಂಕ ಬೇಡ

ಈ ದುರ್ಘಟನೆಯಲ್ಲಿ ಬೋಟ್ ಹಾಗೂ ಅದರಲ್ಲಿದ್ದ ಬೆಲೆಬಾಳುವ ಮೀನುಗಾರಿಕಾ ಬಲೆಗಳು ಸಂಪೂರ್ಣವಾಗಿ ಸಮುದ್ರ ಪಾಲಾಗಿವೆ. ಇದರಿಂದಾಗಿ ಮಾಲೀಕರಿಗೆ ಕೋಟ್ಯಂತರ ರೂಪಾಯಿ ಮೊತ್ತದ ಆರ್ಥಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...