ಹಾಸನ l ಕಲ್ಲಹಳ್ಳಿಯ ಪ್ರಪಾತದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ: ಕೊಲೆ ಶಂಕೆ

Date:

Advertisements

ಪ್ರಪಾತವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ಯಸಳೂರು ಹೋಬಳಿಯ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ ಬಳಿ ವರದಿಯಾಗಿದೆ.

ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ, ಕೊಲೆಯಾದವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಕ್ಕೆಹೊಳೆ ಜಂಗ್ಲನ್ ನಿವಾಸಿ ಸಂಪತ್ ಅಲಿಯಾಸ್ ಶಂಭು. ಈತನು ತನ್ನ ಗೆಳೆಯನ ಕಾರು ಪಡೆದುಕೊಂಡು ಹೋಗಿದ್ದ. ಅಲ್ಲದೆ, ಕಳೆದ ಶನಿವಾರ ಯಸಳೂರು ಸಮೀಪದ ಪ್ರದೇಶದಲ್ಲಿ ರಕ್ತದ ಕಲೆಗಳಿರುವ ಕಾರು ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಸಂಪತ್‌ನ ಶವವನ್ನು ಪತ್ತೆ ಹಚ್ಚಿದ್ದಾರೆ.

Screenshot 2025 05 14 20 16 45 82 40deb401b9ffe8e1df2f1cc5ba480b12

ಅಪರಿಚಿತರು ಸಂಪತ್‌ನನ್ನು ಬರ್ಬರವಾಗಿ ಕೊಚ್ಚಿ ಹತ್ಯೆಗೈದು, ಶವವನ್ನು ಕಾರಿನಲ್ಲಿ ತಂದು ಪ್ರಪಾತದಲ್ಲಿ ಬಿಸಾಡಿದ್ದಾರೆ. ಆತನು ಕೆಲ ತಿಂಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರು ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಆರೋಪಿಯಾಗಿದ್ದ.

Advertisements

ಕಳೆದ ಏಪ್ರಿಲ್ 9 ರಂದು ಕುಶಾಲನಗರದ ಗೆಳೆಯನಿಂದ ಸಂಪತ್ ತೆಗೆದುಕೊಂಡು ಹೋಗಿದ್ದ ಕಾರು, ಮೇ 10ರಂದು ಕಲ್ಲಹಳ್ಳಿಯಲ್ಲಿ ಬಿಟ್ಟುಹೋಗಲಾಗಿತ್ತು. ಶನಿವಾರ ಬೆಳಿಗ್ಗೆ ಗ್ರಾಮಸ್ಥರು ಸಂಶಯಾಸ್ಪದವಾಗಿ ನಿಂತಿದ್ದ ಕಾರನ್ನು ಗಮನಿಸಿದ ಬಳಿಕ, ತೋಟದ ಕಾರ್ಮಿಕರನ್ನು ಕರೆತಂದ ಚಾಲಕನೊಬ್ಬ ಅದರಲ್ಲಿದ್ದ ರಕ್ತದ ಕಲೆಗಳ ಬಗ್ಗೆ ಮಾಹಿತಿ ನೀಡಿದ ನಂತರ, ಯಸಳೂರು ಠಾಣೆಗೆ ದೂರು ನೀಡಲಾಗಿತ್ತು.

ಘಟನೆ ನಡೆದ ಸ್ಥಳಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಎಸ್‌ಐ ಶ್ರೀನಿವಾಸ್ ನೇತೃತ್ವದ ಪೊಲೀಸ್ ತಂಡ, ಶ್ವಾನದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ತೆರಳಿ ಮಹಜರು ಕೈಗೊಂಡಿತು. ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾದ ಕಾರು ಕುಶಾಲನಗರದ ವ್ಯಾಪಾರಿ ಜಾನ್ ಅವರದ್ದು ಎಂದು ಖಚಿತವಾಗಿದೆ. ಸಂಪತ್ ಅದನ್ನು ಶನಿವಾರ ತೆಗೆದುಕೊಂಡು ಹೋಗಿದ್ದನು. ಆ ನಂತರ ಸಂಪತ್‌ನ ಮೊಬೈಲ್ ಸ್ವಿಚ್‌ಆಫ್ ಆಗಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.

ಕುಶಾಲನಗರ ಠಾಣೆಯಲ್ಲಿ ಸಂಪತ್ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಇತ್ತ ಯಸಳೂರು ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು. ನಾಲ್ಕು ದಿನಗಳ ಶೋಧದ ಬಳಿಕ ಶವ ಪತ್ತೆಯಾಗಿದೆ. ಬೇರೆಡೆ ಕೊಲೆ ಮಾಡಿ ಮಲೆನಾಡು ಪ್ರದೇಶಕ್ಕೆ ಶವವನ್ನು ಬಿಸಾಕಿ ಹೋಗಿರಬಹುದು ಎಂದು  ಶಂಕಿಸಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ l ಜನವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆ 

ಈ ಹಿಂದೆ ಸಾಕಷ್ಟು ಗಲಾಟೆಗಳಲ್ಲಿ ಸಂಪತ್ ಭಾಗಿಯಾಗಿದ್ದನೆಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಂಧಿತ ವ್ಯಕ್ತಿಗಳ ವಿಚಾರಣೆ ಕೈಗೊಂಡಿದ್ದರು. ಆದರೂ ನಿರ್ದಿಷ್ಟ ಸುಳಿವು ಸಿಗದ ಪರಿಸ್ಥಿತಿಯಲ್ಲಿ, ಈಗ ಶವ ಪತ್ತೆಯಾಗಿದ್ದು ಪ್ರಕರಣವು ಹೊಸ ತಿರುವು ಪಡೆದಿದೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X