ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ 57 ವರ್ಷದ ಮಹಿಳೆಯ ಮೃತದೇಹ 8 ದಿನದ ಬಳಿಕ ಪತ್ತೆಯಾಗಿದೆ. ಇದರಿಂದ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ಶವ ಪತ್ತೆಯಾದ ಮಹಿಳೆಯನ್ನು ಸಣ್ಣಿ ಹನುಮಂತ ಗೌಡ ಎಂದು ಗುರುತಿಸಲಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಶವ ಪತ್ತೆಯಾಗಿದ್ದು, ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಮಹಿಳೆ ಮೃತಪಟ್ಟಿದ್ದಳು.
ಶಿರೂರು ಗುಡ್ಡ ಕುಸಿತಗೊಂಡು ಇಂದಿಗೆ 8 ದಿನಗಳಾಗಿವೆ. ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಕೇರಳ ಮೂಲದ ಅರ್ಜುನ್ ಶವ ಇನ್ನೂ ಪತ್ತೆಯಾಗಬೇಕಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | RSS ನಿಷೇಧ ತೆರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆಯೇ?
ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿದರೂ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋ ತಂಡದಿಂದ ಶೋಧ ಕಾರ್ಯ ಮುಂದುವರೆಸಲಾಗಿದೆ.