ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಭಾರತ್ ಬಿಸ್ಕೆಟ್ ಪ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಸಲೀಂ ಮೃತ ಕಾರ್ಮಿಕ, ಮತ್ತೋರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ. ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಯ್ಲರ್ ಸ್ಟೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬಳ್ಳಾರಿ ಗ್ರಾಮೀಣ ಠಾಣೆಎ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.