ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ: ಪ್ರಕರಣ ಸಿಸಿಬಿಗೆ ವರ್ಗಾಯಿಸಿದ ಕಮಿಷನರ್

Date:

Advertisements

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್​​ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.

ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ, ಸ್ಯಾಂಕಿ ರಸ್ತೆಯಲ್ಲಿರುವ ಜವಾಹರಲಾಲ್ ನೆಹರು ತಾರಾಲಯ ಮತ್ತು ವಸಂತನಗರದ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ಗೆ ಕಳೆದ ಶುಕ್ರವಾರ(ಜ.5) ಬೆಳಗ್ಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು.

ಇ-ಮೇಲ್‌ನಲ್ಲಿ “ಟೆರರೈಸರ್ಸ್ 111” ಎಂಬ ಭಯೋತ್ಪಾದಕ ಸಂಘಟನೆ ಎಂದು ಹೇಳಿಕೊಂಡಿದ್ದರಿಂದ ಮೂರೂ ಸ್ಥಳಗಳಲ್ಲಿ ಸಂಪೂರ್ಣ ಶೋಧ ನಡೆಸಿದ ನಂತರ ಬೆದರಿಕೆಗಳು ಸುಳ್ಳು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಈ ಸಂಬಂಧ ಕಬ್ಬನ್ ಪಾರ್ಕ್, ಹೈಗ್ರೌಂಡ್ಸ್ ಹಾಗೂ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Advertisements

ಇದೀಗ ಇವುಗಳ ಪೈಕಿ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ನಲಾಜಿಕಲ್ ಮ್ಯೂಸಿಯಂಗೆ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಈ ಪ್ರಕರಣವನ್ನು  ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸಿಸಿಬಿಯವರಿಗೆ ವರ್ಗಾಯಿಸಿ, ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ, “ಬೆಂಗಳೂರಿನ ಶಾಲೆಗಳಿಗೆ ಸೇರಿದಂತೆ ವಿವಿಧ ಕಡೆಗೆ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬರುತ್ತಾ ಇದೆ. ಎಲ್ಲವನ್ನೂ ತನಿಖೆ ನಡೆಸಲಾಗುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳು ಕೂಡ ಇದನ್ನು ತನಿಖೆ ನಡೆಸುತ್ತಿದ್ದೆ. ಹಾಗಾಗಿ, ಕೇಂದ್ರೀಯ ತನಿಖಾ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ತನಿಖೆ ಮಾಡುವ ನಿಟ್ಟಿನಲ್ಲಿ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದಿದ್ದ ಬೆದರಿಕೆ ಇ-ಮೇಲ್​​ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಉಳಿದ ಪ್ರಕರಣಗಳನ್ನು ಆಯಾಯ ಪೊಲೀಸ್ ಠಾಣೆಯ ಉಸ್ತುವಾರಿಗಳು ತನಿಖೆ ಮಾಡುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X