ಸರ್ಕಾರದ ಮೇಲೆ ಹೈಕಮಾಂಡ್ ನಿಯಂತ್ರಣ, 2ನೇ ಅವಧಿಯಲ್ಲಿ ಸಿದ್ದರಾಮಯ್ಯ ವೀಕ್: ಬೊಮ್ಮಾಯಿ

Date:

  • ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದೆ
  • ಇಡೀ ಸಂಪುಟ ದೆಹಲಿಗೆ ಹೋಗಿ ಸಭೆ ನಡೆಸಿರುವುದು ಮೊದಲು

ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡೀ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ‌ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ” ಎಂದರು.

ಎರಡನೇ ಅವಧಿಯಲ್ಲಿ ಸಿದ್ದರಾಮಯ್ಯ ವೀಕ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು” ಎಂದರು.

“ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟ್ರಾನ್ಸಫರ್ ದಂಧೆ, ಸ್ವಜನ ಪಕ್ಷಪಾತ ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ

“ಎರಡೇ ತಿಂಗಳಲ್ಲಿ ಮುಖ್ಯಮಂತ್ರಿಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ. ಸಿದ್ದರಾಮಯ್ಯ 1ಗೂ, ಸಿದ್ದರಾಮಯ್ಯ 2ಗೂ ಬಹಳಷ್ಟು ವ್ಯತ್ಯಾಸವಾಗಿದೆ. ರಾಜಕೀಯ ಸ್ಥಿತಿಗತಿ ಆಗಿನಿಂದ ಈಗ ಬದಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ, ಆದರೆ, ಅವರು ಅಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ” ಎಂದು ಅಭಿಪ್ರಾಯಪಟ್ಟರು.

“ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಮಾತನಾಡುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಅವ್ಯವಹಾಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಈ ಬಗ್ಗೆ ಉತ್ತರ ನೀಡಲಿ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಬಿಡುಗಡೆಯಾದ ಹಣ ತಡೆ ಹಿಡಿದಿದ್ದಾರೆ. ಇದರಿಂದ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ” ಎಂದರು.

ದಲಿತ ವಿರೋಧಿ ನೀತಿ

“ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು ಸರ್ಕಾರದ ದಲಿತ ವಿರೋಧಿ ನೀತಿ ತೋರಿಸುತ್ತದೆ. ಎಸ್ಸಿಪಿ ಟಿಎಸ್ ಪಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿಗೆ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್‌ನ ದಲಿತ ವಿರೋಧಿ ನೀತಿ ತೋರಿಸುತ್ತದೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ...

ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು...

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ...