ಮಂಗಳೂರು | ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ ಹಿನ್ನೆಲೆ; ‘ಬೊಂಡ ಫ್ಯಾಕ್ಟರಿ’ ಬಂದ್‌ ಮಾಡಲು ಆದೇಶ

Date:

Advertisements

ಮಂಗಳೂರಿನ ಅಡ್ಯಾರ್​​ನಲ್ಲಿರುವ ಎಳನೀರು ಮತ್ತು ನ್ಯಾಚುರಲ್ಸ್‌ ಐಸ್‌ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್ ಜಾರಿಗೊಳಿಸಿದ್ದು, ಬೊಂಡ ಫ್ಯಾಕ್ಟರಿ ಬಂದ್ ಮಾಡುವಂತೆ ಆದೇಶಿಸಲಾಗಿದೆ.

ಮಂಗಳೂರು ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್ ನೀಡಿ ಬಂದ್ ಮಾಡಿಸಿದ್ದಾರೆ.

Advertisements

WhatsApp Image 2024 04 12 at 4.34.05 PM

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, “ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು, ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ರೆಸಾರ್ಟ್‌ಗೆ ತೆರಳಿದ್ದ ಕುಟುಂಬಕ್ಕೆ ಆಘಾತ: ಸ್ವಿಮ್ಮಿಂಗ್​ ಪೂಲ್​ನಲ್ಲಿ ಮುಳುಗಿ ಬಾಲಕ ಸಾವು

ಏಪ್ರಿಲ್ 8ರಂದು ಬೊಂಡ ಫ್ಯಾಕ್ಟರಿಯಿಂದ ಎಳನೀರು ಖರೀದಿ ಮಾಡಿ ಸೇವಿಸಿದ್ದರು. ಬಳಿಕ ಏಪ್ರಿಲ್ 9ರಿಂದ ವಾಂತಿ, ಬೇಧಿಯಾಗಿ ಅಸ್ವಸ್ಥರಾಗಿದ್ದರು. ಅಡ್ಯಾರ್​​ನಲ್ಲಿರುವ ಲ್ಯಾಂಡ್ಸ್ ಫ್ಲವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಸುತ್ತಮುತ್ತಲಿನ ನಿವಾಸಿಗಳು ಲೀಟರ್ ಲೆಕ್ಕದಲ್ಲಿ ಎಳನೀರು ಖರೀದಿಸಿದ್ದರು. ಬಳಿಕ ಅದನ್ನು ಸೇವಿಸಿದ ಬಳಿಕ ವಾಂತಿ. ಬೇಧಿ, ಜ್ವರ ಮತ್ತು ತಲೆನೋವಿನಿಂದ ಬಳಲಿದ್ದರು.

ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ ಅಧಿಕಾರಿಗಳು

ಬುಧವಾರದಂದು ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಇವರಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣವೇ ಇವರಿಬ್ಬರೂ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ, ಎಳನೀರಿನ ಸ್ಯಾಂಪಲನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಿದ್ದಾರೆ. ಇಡೀ ಫ್ಯಾಕ್ಟರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಶುಚಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2024 04 12 at 4.34.04 PM

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ...

ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ...

Download Eedina App Android / iOS

X