ಶಿವಮೊಗ್ಗ ನಗರದಲ್ಲಿ ಸುರಿದ ಮೊದಲ ಮಳೆಗೆ ತಂಪಾದ ಇಳೆ

Date:

ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ ನಗರಕ್ಕೆ ಶನಿವಾರ ಸಂಜೆ ಬಿದ್ದ ಮುಂಗಾರು ಪೂರ್ವ ಮಳೆ ತಂಪೆರೆಯಿತು.

- Advertisement -

ಪ್ರಸ್ತುತ ವರ್ಷ ಭಾರೀ ಪ್ರಮಾಣದ ತಾಪಮಾನಕ್ಕೆ ಕೆಲ ಗ್ರಾಮಗಳಲ್ಲಿ ಜಲಮೂಲಗಳು ಬರಿದಾಗಲಾರಂಭಿಸಿದ್ದವು. ಅಂತರ್ಜಲ ಮಟ್ಟದಲ್ಲಿ ಇಳಿಕೆ ಕಂಡುಬಂದಿತ್ತು. ಇದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಲಾರಂಭಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಕೆಲ ದಿನಗಳವರೆಗೆ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇತ್ತೀಚೆಗೆ ಜಿಲ್ಲೆ ಹಾಗೂ ತಾಲೂಕಿನ ಹಲವೆಡೆ ಚದುರಿದಂತೆ ಬೇಸಿಗೆ ಮಳೆಯಾದರೂ, ಶಿವಮೊಗ್ಗ ನಗರದಲ್ಲಿ ಮಳೆಯಾಗಿರಲಿಲ್ಲ. ಮತ್ತೊಂದೆಡೆ, ನಗರದಲ್ಲಿ ಬಿಸಿಲ ಬೇಗೆ ಹೆಚ್ಚಾಗಿತ್ತು. ತಾಪಮಾನದ ಪ್ರಮಾಣ 35 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಮಟ್ಟದಲ್ಲಿ ದಾಖಲಾಗುತ್ತಿತ್ತು. ಆದರೆ ಶನಿವಾರ ಸಂಜೆಯಿಂದ ಎಡಬಿಡದೆ ಮಳೆಯಾಗುತ್ತಿದೆ. ಇದರಿಂದ ನಾಗರಿಕರು ನಿಟ್ಟುಸಿರು ಬಿಡುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಶಾಸಕಾದ್ವಯರ ಪತ್ರಿಕಾಗೋಷ್ಠಿ : ಸಧ್ಯದಲ್ಲಿಯೇ ನಿಜಾಂಶ ಹೊರಬರಲಿದೆ

ನಗರದ ಹಲವೆಡೆ ರಸ್ತೆಯ ಮೇಲೆಯೇ ಮಳೆ ನೀರು ಹರಿದು ಹೋಗುತ್ತಿತ್ತು. ಶಿವಮೊಗ್ಗ ನಗರ ಮಾತ್ರವಲ್ಲದೆ ತಾಲೂಕಿನ ಹಲವು ಗ್ರಾಮಗಳಲ್ಲಿಯೂ ಶನಿವಾರ ಸಂಜೆ ಭರ್ಜರಿ ಮಳೆಯಾದ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...