ಬೆಂಗಳೂರಿನಲ್ಲಿ ವಿಳಾಸ ಕೇಳುವ ನೆಪದಲ್ಲಿ ಬಂದ ಕಿರಾತಕರು ಬಾಲಕನನ್ನು ಪ್ರಜ್ಞೆ ತಪ್ಪಿಸಿ ಅಪಹರಿಸಿದ್ದು, ಹಾಸನದಲ್ಲಿ ಬಿಟ್ಟುಹೋಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಅನಂತಪುರದ ಕೃಷ್ಣೇಗೌಡರ ಮಗ ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ಚಿರಾಗ್(17) ಅವರನ್ನು ಮಂಗಳವಾರ ಬೆಳಿಗ್ಗೆ ಕಾಲೇಜಿಗೆ ತೆರಳುವ ವೇಳೆ ಅಪಹರಿಸಲಾಗಿತ್ತು. ಆತನನ್ನು ಹಾಸನದಲ್ಲಿ ಬಿಟ್ಟು ಆರೋಪಿಗಳು ಪಾರಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ ಕಾಲೇಜಿಗೆ ತೆರಳುವ ವೇಳೆ ಪ್ರಜ್ಞೆ ತಪ್ಪಿ ಎಚ್ಚರಗೊಂಡಾಗ ಬಾಲಕ ಹಾಸನ ಜಿಲ್ಲೆಯ ಅರಕಲಗೂಡು ಸಮೀಪದಲ್ಲಿದ್ದ. ಬಳಿಕ ಸಮೀಪದ ಮನೆ ಬಳಿ ತೆರಳಿ ಪೋಷಕರಿಗೆ ಫೋನ್ ಮಾಡಿದ್ದಾನೆ. ಕೂಡಲೇ ಹಾಸನಕ್ಕೆ ಬಂದ ಪೋಷಕರು ಮಗನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು; ಹಲವರ ಬಂಧನ
ಅಸ್ವಸ್ಥಗೊಂಡಿದ್ದ ಬಾಲಕ ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯಾರು ಯಾವ ಕಾರಣಕ್ಕೆ ಅಪಹರಣ ಮಾಡಿದ್ದಾರೆನ್ನುವ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದು, ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಗೆ ಅಪಹರಣದ ಬಗ್ಗೆ ದೂರು ನೀಡಿದ್ದಾರೆ.