ಚಿಕ್ಕಬಳ್ಳಾಪುರ | ಜನಿವಾರ, ಜಾತಿ ಗಣತಿಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾ ಆಕ್ಷೇಪ

Date:

ಜನಿವಾರ ಬ್ರಾಹ್ಮಣರ ಉಪನಯನದ ಬಳಿಕ ಧರಿಸುವ ಶ್ರೇಷ್ಠ ದಾರ. ಅದನ್ನ ಒಮ್ಮೆ ಧರಿಸಿದ ಮೇಲೆ ಮತ್ತೊಮ್ಮೆ ತೆಗೆಯುವಂತಿಲ್ಲ. ಜನಿವಾರ ಹಳೆಯದಾದ ಬಳಿಕ ಹೊಸತನ್ನು ಹಾಕಿದ ಬಳಿಕವಷ್ಟೇ ಹಳೆಯದನ್ನು ತೆಗೆಯುತ್ತೇವೆ. ಹೀಗಿರುವಾ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿರುವುದು, ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ಹೊರಗುಳಿಯುವಂತೆ ಮಾಡಿರುವುದು ಖಂಡನೀಯ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪ್ರತಿನಿಧಿ ನಾಗಭೂಷಣ್ ಹೇಳಿದರು.

- Advertisement -

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ಜನಿವಾರ ತೆಗೆಯದ ಕಾರಣ ವಿದ್ಯಾರ್ಥಿ ಪರೀಕ್ಷೆ ಬರೆದಿಲ್ಲ ಮತ್ತು ಬೀದರ್‌ ನಲ್ಲಿ ಜನಿವಾರ ತೆಗೆಸಿ ಕಸದಬುಟ್ಟಿಗೆ ಹಾಕಲಾಗಿದೆ. ಇದು ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅಪಮಾನ. ಇದನ್ನು ಬ್ರಾಹ್ಮಣ ಸಮುದಾಯ ಎಂದಿಗೂ ಒಪ್ಪುವುದಿಲ್ಲ. ಕೂಡಲೇ ವಿದ್ಯಾರ್ಥಿ ಸುಚಿವ್ರತ್‌ ಎಂಬಾತನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ, ಆತನ ಮುಂದಿನ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಮ್ಮ ಆಂತರಿಕ ವರದಿಯ ಪ್ರಕಾರ ರಾಜ್ಯದಲ್ಲಿ ಸುಮಾರು 45 ಲಕ್ಷ ಬ್ರಾಹ್ಮಣರ ಜನಸಂಖ್ಯೆ ಇದೆ. ಆದರೆ, ಸರಕಾರ ಜಾತಿ ಗಣತಿಯ ಪ್ರಕಾರ ಶೇ.2.8ರಷ್ಟಿದೆ ಎಂದಿರುವುದು ಸರಿಯಲ್ಲ. ಸಮೀಕ್ಷೆಯಲ್ಲಿ ತಪ್ಪಾಗಿದೆ. ಹಾಗಾಗಿ ಸರಕಾರ ಮತ್ತೊಮ್ಮೆ ಸಮೀಕ್ಷೆ ನಡೆಸುವ ಮೂಲಕ ಜಾತಿ ಗಣತಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಬ್ರಾಹ್ಮಣ ಮಹಾಸಭಾದ‌ ಜಿಲ್ಲಾ ಪ್ರತಿನಿಧಿ ಪ್ರಕಾಶ್ ಮಾತನಾಡಿ, ಶಿವಮೊಗ್ಗದಲ್ಲಿ ಕೆಇಎ ಅಧಿಕಾರಿಗಳು ಎಡವಟ್ಟಿನಿಂದ ಬಡ ವಿದ್ಯಾರ್ಥಿಗೆ ಅನ್ಯಾಯವಾಗಿದೆ. ಜನಿವಾರ ತೆಗೆಸಿರುವುದು ಸರಿಯಲ್ಲ. ಪರೀಕ್ಷಾ ಕೇಂದ್ರದಲ್ಲಿ ಏನನ್ನು ಧರಿಸಬೇಕು ಎಂಬುದರ ಕುರಿತು ಸರಕಾರ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

ರಾಜ್ಯದಲ್ಲಿ ಶೇ.15-20ರಷ್ಟು ಮಾತ್ರ ಜಾತಿ ಗಣತಿ ಸಮೀಕ್ಷೆ ಆಗಿದೆ. ಆದ್ದರಿಂದ, ಸರಿಯಾದ ಜಾತಿಗಣತಿ ನಡೆಸುವ ಮೂಲಕ ಎಲ್ಲಾ ಸಮದಾಯಗಳಿಗೂ ಸೂಕ್ತ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾಧ್ಯಕ್ಷರ ಹೇಳಿರುವಂತೆ ಇಡೀ ರಾಜ್ಯಾದ್ಯಂತ ಬ್ರಾಹ್ಮಣರು ಬೀದಿಗಿಳಿದು ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದರು.

ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬ್ರಾಹ್ಮಣ ಸಮಾಜದ ಮುಖಂಡರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರಮೇಶ್‌, ಚಿಂತಾಮಣಿ ರಮೇಶ್‌, ತಾಲೂಕು ಅಧ್ಯಕ್ಷ ಕೃಷ್ಣಪ್ಪ, ಅನುಪಮಾ, ಶಾರದ, ಉಮಾಶಂಕರ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...