ಉಡುಪಿ | ಪತ್ರಿಕೋದ್ಯಮ ಫ್ಯಾಷನ್ ಆಗಿ ತೆಗೆದುಕೊಳ್ಳಬೇಡಿ, ವಿಷನ್ ಇರಲಿ – ಲಕ್ಷ್ಮೀ ಮಚ್ಚಿನ

Date:

Advertisements

ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಪತ್ರಿಕೋದ್ಯಮಕ್ಕೆ ಬನ್ನಿ ಎಂದು ಉದಯವಾಣಿ ದಿನಪತ್ರಿಕೆ ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ತಿಳಿಸಿದರು.

ಅವರು ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಇಂದು ಸಮಾಜದಲ್ಲಿ ಸುಳ್ಳು ಯಾವುದು ಸತ್ಯ ಯಾವುದು ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುವ ಸ್ಥಿತಿ ಇದೆ ಹಾಗೂ ಒಳ್ಳೆತನವನ್ನು ಗೌರವಿಸುವವರ ಸಂಖ್ಯೆ ಕೂಡ ಕಡಿಮೆ ಇದೆ. ಆದರೆ ಇವೆಲ್ಲದರ ನಡುವೆ ನಾವು ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡರೆ ಅದನ್ನು ಗೌರವಿಸುವ ವರ್ಗವೂ ಇದ್ದು ಒಳ್ಳೆತನವನ್ನು ಮರೆಯಬೇಡಿ ಎಂದರು.

Advertisements
1006385848

ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ ಅವಕಾಶವಿದೆ. ಆದರೆ ರಂಗದಲ್ಲಿ ಒಂದಷ್ಟು ಸವಾಲುಗಳಿರುವುದುರಿಂದ ಒಂದಷ್ಟು ಅಧ್ಯಯನ ಮಾಡಿ, ಒಳಿತು-ಕೆಡುಕುಗಳನ್ನು ತಿಳಿದು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದರು.

ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬ್ರಹ್ಮಾವರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಹಿರಿಯ ವರದಿಗಾರ, ಕಾರ್ಕಳ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪೇತ್ರಿ ಭಾಸ್ಕರ ರಾವ್ ಅವರಿಗೆ ಪತ್ರಿಕಾ ದಿನಾಚರಣೆ ಪುರಸ್ಕಾರ ನೀಡಿ ಗೌರವಿಸಲಾಯಿತು ಹಾಗೂ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಯು.ಎಸ್.ಶೆಣೈ ಅವರನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಸದಸ್ಯರಾದ ರವೀಂದ್ರ ಕೋಟ, ಪ್ರವೀಣ್ ಮುದ್ದೂರು, ಗಣೇಶ್ ಸಾಬ್ರಕಟ್ಟೆ, ಪ್ರವೀಣ್ ಕುಮಾರ್, ಇಬ್ರಾಹಿಂ ಸಾಹೇಬ್, ಉಪಸ್ಥಿತರಿದ್ದರು. ಸಂಘದ ಸದಸ್ಯ ಮೋಹನ್ ಉಡುಪ ಸ್ವಾಗತಿಸಿ, ಬಂಡೀಮಠ ಶಿವರಾಮ ಆಚಾರ್ಯ ಹಾಗೂ ಕೆ.ಜಿ.ವೈದ್ಯ ಸಮ್ಮಾನಿತರನ್ನು ಪರಿಚಯಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಹರೀಶ್ ಕಿರಣ್ ತುಂಗ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X