ಬ್ರೇಕಿಂಗ್ ನ್ಯೂಸ್ | ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ; ಬಂಧನ

Date:

ಹಿಂದುತ್ವ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರರಕ್ಷಣಾ ಪಡೆ ಎಂಬ ಸಂಘಟನೆ ಕಟ್ಟಿಕೊಂಡಿರುವ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ, ರಾಮನಗರ ಜಿಲ್ಲೆಯ ಸಾತನೂರು ಬಳಿ ಹಸು ವ್ಯಾಪಾರಿ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ, ಇತ್ತೀಚೆಗೆ, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ.

ಈತನ ವಿರುದ್ಧ 2013ರಿಂದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್‌ ಪಟ್ಟಿ ತೆರೆಯಲು ಪೊಲೀಸರು ಸಿದ್ಧತೆ ನಡೆಸಿ, ಅದಕ್ಕಾಗಿ ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಿಗೆ ವರದಿ ಸಲ್ಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವರದಿ ಪರಿಶೀಲಿಸಿದ್ದ ಸಹಾಯಕ ಪೊಲೀಸ್‌ ಆಯುಕ್ತರು ಜೂನ್ 28ರಂದು ಪುನೀತ್ ಕೆರೆಹಳ್ಳಿಗೆ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್‌ನಲ್ಲಿ, “ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿ ಏಕೆ ತೆಗೆಯಬಾರದು ಎಂಬುದಕ್ಕೆ ವಿವರಣೆ ಸಲ್ಲಿಸಬೇಕು. ಇಲ್ಲದಿದ್ದರೆ ರೌಡಿಶೀಟರ್ ಪಟ್ಟಿ ತೆರೆಯುತ್ತೇವೆ” ಎಂದು ಹೇಳಿದ್ದರು.

ಇದೀಗ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್‌ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್‌ ಸಿಟಿ, ಸಾತನೂರು ಪೊಲೀಸ್‌ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ.

5 accused in police custody

ಸಿಸಿಬಿ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಆಗಸ್ಟ್ 11ರ ತಡರಾತ್ರಿಯೇ ಬಂಧಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಬಂಧನವಾದರೆ ಒಂದು ವರ್ಷ ಜಾಮೀನು ಸಿಗುವುದಿಲ್ಲ. ಜೈಲುವಾಸ ಖಾಯಂ ಆಗಲಿದೆ.

ಈ ಬಗ್ಗೆ ಶುಕ್ರವಾರ ತಡರಾತ್ರಿ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

32 ವರ್ಷದ ಈತ ಬೆಂಗಳೂರಿನ ಜೆಪಿ ನಗರದ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆ ಕಟ್ಟಿಕೊಂಡು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನೂರರ ಗಡಿ ದಾಟಿದ ಟೊಮೆಟೊ ದರ; ದ್ವಿಶತಕದತ್ತ ಮುಖ ಮಾಡಿದ ಬೀನ್ಸ್‌

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ...

ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ನಿರ್ಧಾರ : ಅಂಗನವಾಡಿ ನೌಕರರ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭಿಸುವ...

ತುಮಕೂರು | ಕಲುಷಿತ ನೀರಿಗೆ ಆರು ಮಂದಿ ಬಲಿ; 50 ಮಂದಿ ಅಸ್ವಸ್ಥ

ಕರ್ನಾಟಕದ ಗಡಿಭಾಗದಲ್ಲಿರೊ ಪುಟ್ಟ ಗ್ರಾಮ ತುಮಕೂರು ಜಿಲ್ಲೆಯ ಚಿನ್ನೇನಹಳ್ಳಿ. ಗ್ರಾಮದಲ್ಲಿ ಸುಮಾರು...

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...