ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಶೀಟಿನ ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಡೆಕೊರೇಶನ್ ವಸ್ತುಗಳ ಸಂಗ್ರಹವಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗೂ ಬೆಂಕಿ ತಗುಲಿ ಬೆಂಕಿ ಇನ್ನಷ್ಟು ವ್ಯಾಪಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ.
ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗೊಂಡಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.