ಕೆಲವು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ಟ್ವಿಟರ್‌ಗೆ ಕರ್ನಾಟಕ ಹೈಕೋರ್ಟ್ 50 ಲಕ್ಷ ರೂ. ದಂಡ ವಿಧಿಸಿದೆ.
ಕೆಲವು ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರ್‌ಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ, ಸರ್ಕಾರದ ಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಟ್ವಿಟರ್ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅರ್ಜಿ ಸಲ್ಲಿಸಿದ್ದಕ್ಕಾಗಿ 50 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. 45 ದಿನಗಳ ಒಳಗೆ ದಂಡ ಪಾವತಿಸುವಂತೆ ನಿರ್ದೇಶಿಸಿದ್ದಾರೆ.
ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ನಿಗದಿತ ಅವಧಿಯೊಳಗೆ ದಂಡ ಪಾವತಿ ಮಾಡದಿದ್ದರೆ, ದಿನಕ್ಕೆ 5,000 ರೂ. ಹೆಚ್ಚುವರಿ ದಂಡ ಪಾವತಿಸಬೇಕಾಗುರತ್ತದೆ ಎಂದು ಹೈಕೋರ್ಟ್ ಹೇಳಿದೆ.
ಯಾವ ಖಾತೆಗಳು? ಸುದ್ದಿ ಇನ್ನಷ್ಟು ವಿವರ ಬೇಡುತ್ತದೆ.