ಮಂಗಳೂರು | ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

- Advertisement -

ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಬಸ್ಸಿನಲ್ಲಿ 40ರಿಂದ 50 ರಷ್ಟು ಪ್ರಯಾಣಿಕರು ಇದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

kaikamba

ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿಯ ಸುಮಾರು 100 ಮೀ ಸಾಗುವಾಗಲೇ ಈ ಅವಘಡ ಸಂಭವಿಸಿದೆ. ಬಸ್ಸು ಕೈಕಂಬದಿಂದ ಬಿ ಸಿ ರೋಡ್‌ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಈ ಬಗ್ಗೆ ಈ ದಿನ.ಕಾಮ್ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಸಂಪರ್ಕಿಸಿದಾಗ, “ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಸುಮಾರು 40ರಿಂದ 50ರಷ್ಟು ಪ್ರಯಾಣಿಕರಿದ್ದರು ಎಂದು ನಮಗೆ ಪ್ರಾಥಮಿಕವಾಗಿ ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆಯ ವೇಳೆಗೆ ಈ ಅವಘಡ ಸಂಭವಿಸಿದೆ” ಎಂದು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

WhatsApp Image 2024 01 02 at 7.46.42 PM

WhatsApp Image 2024 01 02 at 7.46.42 PM 2

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...