BIG BREAKING | ತುಮಕೂರು ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Date:

Advertisements

ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. 21 ಮಂದಿ ಆರೋಪಿಗಳನ್ನು ಅಪರಾಧಿಗಳು ಎಂದು ಬುಧವಾರ ಕೋರ್ಟ್‌ ಘೋಷಿಸಿತ್ತು. ಇದೀಗ, ಶಿಕ್ಷೆಯನ್ನು ಪ್ರಕಟಿಸಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದಿದ್ದು, ಬುಧವಾರ ವಿಚಾರಣೆ ಮುಗಿದಿದೆ.

ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದಾರೆ. ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯನ್ನು ಪ್ರಟಿಸಿದೆ.

Advertisements
1002425606

ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.

ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

ಈ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ- ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಎಂದು ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್‌, ರಾಮಯ್ಯ, ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ.

ಇತ್ತೀಚೆಗೆ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಕೊಪ್ಪಳ ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿತ್ತು. ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ, ಕೊಪ್ಪಳ ಕೋರ್ಟ್‌ ತೀರ್ಪಿಗೆ ಹೈಕೋರ್ಟ್‌ ತಡೆ ನೀಡಿತ್ತು. ಇದೀಗ, ತುಮಕೂರು ಜಿಲ್ಲಾ ನ್ಯಾಯಾಲಯವು 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X