Breaking | ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್: ಬ್ಯಾಟ್‌-ಬೆಲ್ಟ್‌ ನಿಂದ ಹೊಡೆದಾಡಿರುವ ವಿಡಿಯೋ ವೈರಲ್

Date:

ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಬೆಲ್ಟ್‌ ಮತ್ತು ಬ್ಯಾಟ್‌ಗಳಿಂದ ಹೊಡೆದಾಡಿಕೊಂಡಿದ್ದು, ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ತಳಸೆಂದ ಬಳಿಯ ಖಾಸಗಿ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ನಡೆದಿದೆ. ಎರಡು ವಿದ್ಯಾರ್ಥಿ ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

- Advertisement -

ಸುಮಾರು 15 ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್ ಹೆಸರನಲ್ಲಿ ಜೂನಿಯರ್‌ಗಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಸನಿ ಮೊಹೊತೆ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ವಸತಿ ನಿಲಯದಲ್ಲಿ ಶಿಸ್ತು ಕಾಪಾಡಲು ವಿಫಲವಾದ ಹಿನ್ನೆಲೆ ಹಾಸ್ಟೇಲ್ ವಾರ್ಡನ್ ವಿರುದ್ಧ ಕೇಸ್ ದಾಖಲಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೊಲ್ಹಾಪುರ ಜಿಲ್ಲಾಡಳಿತ ತನಿಖೆ ನಡೆಸಲು ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಶಾಲಾ ಆಡಳಿತದಿಂದ ವರದಿ ಕೋರಲಾಗಿದೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಂವಿಧಾನ ಬದಲಿಸುವ ಸನಾತನಿಗಳ ಹುನ್ನಾರಕ್ಕೆ ವಕೀಲರೇ ದಾಳ

ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ದೃಶ್ಯಗಳು ವೈರಲ್ ಆಗಿರುವ ಹಿನ್ನೆಲೆ, ಪೋಷಕರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ವಸತಿ ನಿಲಯಗಳ ಮೇಲಿನ ಮೇಲ್ವಿಚಾರಣೆ ಮತ್ತು ವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...