ಲಂಚ ಪ್ರಕರಣ | ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು; 5 ಲಕ್ಷ ರೂ. ದಂಡ

Date:

ತನಿಖೆ ಮತ್ತು ವಿಚಾರಣೆ ನಡೆಸಿದ್ದ ಜಿಎಸ್‌ಟಿ ಅಧಿಕಾರಿಯೊಬ್ಬರು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನೂ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.

- Advertisement -

ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ ಮತ್ತು ಕೇಂದ್ರ ತೆರಿಗೆ (GST) ಸೂಪರಿಂಟೆಂಡೆಂಟ್ ಜಿತೇಂದ್ರ ಕುಮಾರ್ ಡಾಗೂರ್ ಅವರು ಉತ್ತರ ಕನ್ನಡ ವಿಭಾಗದ ಹೊನ್ನಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ಅವರು ದೂರುದಾರರಿಂದ ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್ಆಗಿ ಸಿಕ್ಕಿಬಿದ್ದಿದ್ದರು. ಅವರನ್ನು 2021ರ ಮಾರ್ಚ್‌ನಲ್ಲಿ ಸಿಬಿಐ ಬಂಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ತೆರಿಗೆ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿಸಿದ್ದಾರೆ. ಅರ್ಜಿದಾರರಿಗೆ ವಿಧಿಸಿದ್ದ ದಂಡ ಮನ್ನಾ ಮಾಡಲು 50,000 ರೂ.ಗಳ ಲಂಚ ಕೇಳಿದ್ದರು ಎಂದು ಆರೋಪಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ, ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಡಾಗೂರ್ ಅವರು ದೇಶದ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಮತ್ತು ಶ್ರದ್ಧೆಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿತ್ತು. ಆದರೆ ಅಂತಹ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡರೆ, ತೆರಿಗೆದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಇಂಥ ಕೃತ್ಯಗಳಿಂದ ದೇಶದ ಆರ್ಥಿಕ ಸ್ಥಿತಿ ಕೂಡ ಹಾಳಾಗುತ್ತದೆ ಎಂದು ನ್ಯಾಯಮೂರ್ತಿ ಎಚ್‌ಎ ಮೋಹನ್‌ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...