ಲಂಚ ಪ್ರಕರಣ | ಲೋಕಾಯುಕ್ತ ಸಿಬ್ಬಂದಿ ಮೇಲೆ ಕಾರು ನುಗ್ಗಿಸಿದ ಅಧಿಕಾರಿ ಬಂಧನ

Date:

Advertisements

ಲಂಚ ಪಡೆಯುತ್ತಿದ್ದಾಗ ಬಂಧಿಸಲು ಮುಂದಾದ ಲೋಕಾಯುಕ್ತ ಪೊಲೀಸರು ಮತ್ತು ಪಂಚರ ಮೇಲೆ ವಾಹನ ಹತ್ತಿಸಿ ಭ್ರಷ್ಟ ಅಧಿಕಾರಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ಎಂಬ ಅಧಿಕಾರಿ ಉದ್ದಿಮೆ ಪರವಾನಗಿ ಪರಿಶೀಲನೆ ನಡೆಸಲು ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೆ 12,000 ರೂ. ಮುಂಗಡ ಪಡೆದಿದ್ದರು. ಈ ಬಗ್ಗೆ ಉದ್ದಿಮೆದಾರ ರಂಗಧಾಮಯ್ಯ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ಸಾಕ್ಷ ಸಮೇತ (ರೆಡ್‌ಹ್ಯಾಂಡ್) ಮಹಾಂತೇಗೌಡನನ್ನು ಹಿಡಿಯಲು ಯೋಜನೆ ರೂಪಿಸಿದ್ದರು. ರಂಗಧಾಮಯ್ಯ ಅವರನ್ನು ಮುಂದೆ ಕಳುಹಿಸಿ, ಲೋಕಾಯುಕ್ತ ಹಿಂದಿನಿಂದ ಪೊಲೀಸರು ತೆರಳಿದ್ದರು.

Advertisements

ಶುಕ್ರವಾರ ರಾತ್ರಿ ರಂಗಧಾಮಯ್ಯ ಅವರಿಂದ ಮಹಾಂತೇಗೌಡ 43,000 ರೂ. ಲಂಚ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ಸ್ಥಳಕ್ಕೆ ಧಾವಿಸಿ, ಅಧಿಕಾರಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಅಧಿಕಾರಿ ಕಾರು ಏರಿ ಪರಾರಿಯಾಗಲು ಯತ್ನಿಸಿದ್ದು, ಲೋಕಾಯುಕ್ತ ಪೊಲೀಸರತ್ತ ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ. 15 ಕಿ.ಮೀ.ವರೆಗೂ ಆರೋಪಿಯನ್ನು ಬೆನ್ನಟ್ಟಿದ ಪೊಲೀಸರು, ನೆಲಮಂಗಲ‌ ಸೊಂಡೆಕೊಪ್ಪ‌ ರಸ್ತೆಯಲ್ಲಿ ಆರೋಪಿಯನ್ನು ಸುತ್ತುವರಿದು, ಬಂಧಿಸಿದ್ದಾರೆ.

”ಮಹಾಂತೇಗೌಡ ಅವರನ್ನು ಲಂಚ ಪಡೆಯುತ್ತಿದ್ದ ಹಣದ ಸಮೇತ ಬಂಧಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X