ಕೆಎಸ್‌ಒಯು ಪರೀಕ್ಷೆ ಬರೆಯಲು ಲಂಚ; ವಿದ್ಯಾರ್ಥಿಯ ಆಡಿಯೋ ವೈರಲ್

Date:

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ನಲ್ಲಿ ಪರೀಕ್ಷೆಯಲ್ಲೂ ಅವ್ಯವಹಾರ ನಡೆಯುತ್ತಿದೆ. ಹಣ ಕೊಟ್ಟರೆ ಪರೀಕ್ಷೆಯಲ್ಲಿ ಕಾಪಿ (ನಕಲು) ಮಾಡಲು ಅವಕಾಶ ನೀಡಲಾಗುತ್ತದೆ. ಒಂದು ವಿಷಯಕ್ಕೆ 1,000ದಿಂದ 1,500 ರೂ. ಲಂಚ ನೀಡಬೇಕಾಗುತ್ತದೆ ಎಂದು ಮಾತನಾಡಿರುವ ವಿಧ್ಯಾರ್ಥಿ ಮತ್ತು ಪ್ರಾಧ್ಯಾಪಕರ ನಡುವಿನ ಮಾತುಕತೆಯ ಆಡಿಯೋವೊಂದು ವೈರಲ್‌ ಆಗಿದೆ.

ಕೆಎಸ್‌ಒಯು ಅಧಿನದಲ್ಲಿರುವ ರಾಜ್ಯದ ನಾನಾ ವಿಭಾಗಗಳಲ್ಲಿ ಲಂಚದ ಕರ್ಮಕಾಂಡ ನಡೆಯುತ್ತಿದೆ ಎಂದು ಆರೋಪಿಲಾಗಿದೆ. ಸದ್ಯ ವೈರಲ್‌ ಆಗಿರುವ ಆಡಿಯೋದಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿರುವ ಕೆಎಸ್‌ಒಯು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಲಂಚ ಪಡೆಯುತ್ತಿರುವ ಬಗ್ಗೆ ವಿದ್ಯಾರ್ಥಿಯೊಬ್ಬ ಆರೋಪ ಮಾಡಿದ್ದಾನೆ.

ಆಡಿಯೋದಲ್ಲಿರುವಂತೆ, “ಎಂಎಸ್‌ಸಿ ಕೋರ್ಸ್ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಶ್ನೆ ಪತ್ರಿಕೆಗೆ 1,500 ರೂ. ಹಾಗೂ ಎಂಎ, ಎಂಕಾಮ್‌ಗೆ 1,000 ರೂ. ಕೊಡಬೇಕು. ಹಣ ಕೊಟ್ಟವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುತ್ತದೆ. ಹಣ ಕೊಡದವರನ್ನು ಬೇರೆ ಕೊಠಡಿಗಳಲ್ಲಿ ಕೂರಿಸಿ ಕಟ್ಟುನಿಟ್ಟಾಗಿ ಪರೀಕ್ಷೆ ಬರೆಸುತ್ತಾರೆ” ಎಂದು ವಿದ್ಯಾರ್ಥಿ ಹೇಳಿರುವುದು ಕೇಳಿಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚಿತ್ರದುರ್ಗ ಪರೀಕ್ಷಾ ಕೇಂದ್ರದಲ್ಲಿ ಒಂದು ಸೆಮಿಸ್ಟರ್‌ಗೆ 3,000 ರೂ. ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದ ಯುವತಿಯೊಬ್ಬರು, ಪರೀಕ್ಷಾ ಕೇಂದ್ರವನ್ನು ದಾವಣಗೆರೆಗೆ ಬದಲಿಸಿಕೊಂಡಿದ್ದರು. ಆದರೆ, ಅಲ್ಲ, ಪ್ರತಿ ಪ್ರಶ್ನೆ ಪತ್ರಿಕೆಗೇ 1,000 ರೂ. ತೆಗೆದುಕೊಳ್ಳಲಾಗುತ್ತಿದೆ. ದಾವಣಗೆರೆ ಕೇಂದ್ರದ ಕೊಠಡಿಯಲ್ಲಿ 36 ಮಂದಿ ಪರೀಕ್ಷಾರ್ಥಿಗಳಿದ್ದರು. ಅಲ್ಲಿ, ನೋಂದಣಿ ಪ್ರಕಾರ ಕೂರಿಸದೇ, ಯಾರು ಎಲ್ಲಿ ಬೇಕಾದರೂ ಕೂರಲು ಅವಕಾಶ ನೀಡಲಾಗಿತ್ತು. ಆ ಬಗ್ಗೆ ಪ್ರಶ್ನಸಿದರೆ, ‘ಇನ್ವಿಜಿಲೇಟರ್’ ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ” ಎಂದು ಆಡಿಯೋದಲ್ಲಿ ವಿದ್ಯಾರ್ಥಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ...